Breaking News :

ಅಥ್ಲೆಟಿಕ್ಸ್‌ನಲ್ಲಿ ನೆಲ್ಯಹುದಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭರ್ಜರಿ ಜಯ – ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

 


ಜನವಾಹಿನಿ ನ್ಯೂಸ್ ನೆಲ್ಯಹುದಿಕೇರಿ: ಕುಶಾಲನಗರ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ನೆಲ್ಯಹುದಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕೂಡಿಗೆಯ ಕ್ರೀಡಾ ಶಾಲಾ ಮೈದಾನದಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ನೆಲ್ಯಹುದಿಕೇರಿ ತಂಡದ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ.

ವಿಜೇತ ವಿದ್ಯಾರ್ಥಿಗಳ ವಿವರ:

100 ಮೀಟರ್ ಓಟದಲ್ಲಿ ಮೊಹಮ್ಮದ್ ಜಾಸರ್ – ದ್ವಿತೀಯ ಸ್ಥಾನ, ಶಿಫಾನತ್ – ದ್ವಿತೀಯ ಸ್ಥಾನ, 200 ಮೀಟರ್ ಓಟ: ಶಮ್ನಾ – ಪ್ರಥಮ ಸ್ಥಾನ, ಜಾಸರ್ – ದ್ವಿತೀಯ ಸ್ಥಾನ, 3000 ಮೀಟರ್ ಓಟದಲ್ಲಿ ಕೌಶಲ್ಯ – ದ್ವಿತೀಯ ಸ್ಥಾನ, ಬಾಲಕರ 4×100 ಮೀಟರ್ ರಿಲೇಯಲ್ಲಿ ಜಾಸರ್, ಸುಧೀನ್, ಸಿನಾನ್, ನಾಗಪ್ಪ – ಪ್ರಥಮ ಸ್ಥಾನ, ಹ್ಯಾಮರ್ ಥ್ರೋ: ನಾಗಪ್ಪ – ದ್ವಿತೀಯ ಸ್ಥಾನ

ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕ ವೃಂದ ಹಾಗೂ ತಂಡದ ತರಬೇತುದಾರರಾದ *ಧನಂಜಯ ಕುಮಾರ್ ಎಸ್.ಎಂ* ರವರು ಅಭಿನಂದನೆ ಸಲ್ಲಿಸಿ, ಜಿಲ್ಲಾ ಮಟ್ಟದಲ್ಲೂ ಉತ್ತಮ ಸಾಧನೆ ಮಾಡುವಂತೆ ಹಾರೈಸಿದ್ದಾರೆ.

Share this article

ಟಾಪ್ ನ್ಯೂಸ್

More News