ಜನವಾಹಿನಿ ನ್ಯೂಸ್ ಮಡಿಕೇರಿ : ಮಡಿಕೇರಿ ತಾಲ್ಲೂಕಿನ ಮೇಕೇರಿ ಭಾಗದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾದ ಶ್ರೀ ಸ್ಟೀಫನ್ ಅವರು ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ, ಇಂದು ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಅಧ್ಯಕ್ಷರಾದ ಸೌಕಾತ್ ಆಲೀ, ಮಾಜಿ ಬ್ಲಾಕ್ ಅಧ್ಯಕ್ಷರಾದ ಇಸ್ಮಾಯಿಲ್, ಮೇಕೇರಿ ವಲಯ ಅಧ್ಯಕ್ಷರಾದ ಎಚ್. ಸಿ. ಪೊನ್ನಪ್ಪ, ಅಪ್ರು ರವೀಂದ್ರ, ಸಾಬು ತಿಮ್ಮಯ್ಯ, ಪಿಯೂಸ್ ಪೆರೇರಾ ಮತ್ತು ಹಲವು ಸ್ಥಳೀಯ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
Total Views: 0







