Breaking News :

ಆಟೋಗೆ ಹಿಂದಿನಿಂದ ಕಾರು ಡಿಕ್ಕಿ : ಆಟೋ ಚಾಲಕನ ಮೇಲೆ ಹರಿದ ಲಾರಿ – ಚಾಲಕ ಸ್ಥಳದಲ್ಲೇ ಸಾವು


ಜನವಾಹಿನಿ News ಮಡಿಕೇರಿ: ಕಾರೊಂದು ರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ರಸ್ತೆ ಮೇಲೆ ಬಿದ್ದಿದ್ದು, ಈ ವೇಳೆ ಲಾರಿಯೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದು, ಈ ಭೀಕರ ಸರಣಿ ಅಪಘಾತದಲ್ಲಿ ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೊಡಗು ಜಿಲ್ಲೆಯ ಸಂಪಾಜೆ ಗೇಟಿನ ಬಳಿ ಸಂಭವಿಸಿದೆ.

ಸುಂದರ ಚಿಟ್ಟಿಕಾನ ಎಂಬುವವರೇ ಮೃತ ದುರ್ದೈವಿ. ಅವರಿಗೆ 62 ವರ್ಷ ವಯಸ್ಸಾಗಿತ್ತು. ದಿ.ಬಿಸಿಲುಮನೆ ರಾಮಣ್ಣ ಗೌಡರ ಪುತ್ರರಾದ ಸುಂದರರವರು ಕೊಡಗು ಸಂಪಾಜೆ ಗ್ರಾಮ ಪಂಚಾಯಿತಿ ಸದಸ್ಯರಾಗಿ ಮತ್ತು ಉಪಾಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.

ರಿಕ್ಷಾ ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದು, ಸಂಪಾಜೆ ಪೆಟ್ರೋಲ್‌ ಪಂಪ್‌ ಬಳಿಯ ತಿರುವಿನಲ್ಲಿ ಹಿಂದಿನಿಂದ ಬಂದ ಕಾರು ಗುದ್ದಿದೆ. ಈ ವೇಳೆ ರಿಕ್ಷಾ ಪಲ್ಟಿಯಾಗಿ ರಸ್ತೆಗೆ ಬಿದ್ದಿದ್ದು, ಈ ವೇಳೆ ಇನ್ನೊಂದು ಕಡೆಯಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.

ಅಪಘಾತದ ಭೀಕರತೆಗೆ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೋರ್ವ ಪ್ರಯಾಣಿಕನಿಗೂ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಡಿಕ್ಕಿ ಪಡಿಸಿ ಪರಾರಿಯಾದ ಕಾರನ್ನು ವಶಪಡಿಸಿಕೊಂಡಿರುವ ಕೊಡಗು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Share this article

ಟಾಪ್ ನ್ಯೂಸ್

More News