Breaking News :

ಆ.18 ರಂದು ಉದ್ಯೋಗ ಮೇಳ


ಆ.18 ರಂದು ಉದ್ಯೋಗ ಮೇಳ


ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್, 18 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗಮೇಳ ನಡೆಯಲಿದೆ.
ಈ ಉದ್ಯೋಗ ಮೇಳದಲ್ಲಿ ವುಡ್‍ಸ್ಟಾಕ್ ರೆಸಾರ್ಟ್ ಮಡಿಕೇರಿ, ತಾಜ್ ರೆಸಾಟ್ರ್ಸ್, ಮಡಿಕೇರಿ, ಎಚ್‍ಡಿಎಫ್‍ಸಿ ಲೈಪ್ ಇನ್ಸೂರೆನ್ಸ್, ಮಡಿಕೇರಿ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಮುತ್ತೂಟ್ ಪೈನಾನ್ಸ್, ಮೈಸೂರು, ಪ್ಯಾಲೇಶ್ ಟೊಯೋಟ ಮಡಿಕೇರಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಉದ್ಯೋಗಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ., ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ 8296020826 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.

Share this article

ಟಾಪ್ ನ್ಯೂಸ್

More News