Breaking News :

ಆ.20 ರಂದು ಡಿ.ದೇವರಾಜ ಅರಸು ಅವರ 110 ನೇ ಜನ್ಮ ದಿನಾಚರಣೆ

 

ಆ.20 ರಂದು ಡಿ.ದೇವರಾಜ ಅರಸು ಅವರ 110 ನೇ ಜನ್ಮ ದಿನಾಚರಣೆ


ಮಡಿಕೇರಿ : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಸಾಮಾಜಿಕ ಕ್ರಾಂತಿಯ ಹರಿಕಾರ ಹಾಗೂ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಅವರ 110 ನೇ ಜನ್ಮ ದಿನಾಚರಣೆ ಕಾರ್ಯಕ್ರಮವು ಆಗಸ್ಟ್, 20 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಕೆ.ಸಿ.ದಯಾನಂದ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎ.ಎಸ್.ದೀಪಕ್, ಇತರರು ಪಾಲ್ಗೊಳ್ಳಲಿದ್ದಾರೆ.

Share this article

ಟಾಪ್ ನ್ಯೂಸ್

More News