Breaking News :

ಆ.8ರಿಂದ ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ : ಎಲ್ಲೆಲ್ಲಿ ನಿಷೇಧ ಹೇರಲಾಗಿದೆ ಇಲ್ಲಿದೆ ನೋಡಿ ಸಪೂರ್ಣ ಮಾಹಿತಿ


ಪಂಜಿನ ಮೆರವಣಿಗೆ : ಆ.8 ರಿಂದ ಜಿಲ್ಲೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ


ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಹಲವೆಡೆ ನಡೆಯಲಿರುವ ಪಂಜಿನ ಮೆರವಣಿಗೆ ಪ್ರಯುಕ್ತ ವಿವಿಧೆಡೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶ ಹೊರಡಿಸಿದ್ದಾರೆ.

ಆಗಸ್ಟ್ 8ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12ಗಂಟೆಯವರೆಗೆ ಮಡಿಕೇರಿ ನಗರ ಹಾಗೂ ಸುತ್ತಮುತ್ತಲಿನ 10 ಕಿ.ಮೀ ಪ್ರದೇಶದಲ್ಲಿ, ಆ.9ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಮಾದಾಪುರ ಹಾಗೂ ಐಗೂರು ಸುತ್ತಮುತ್ತಲಿನ 10 ಕಿ.ಮೀ ವ್ಯಾಪ್ತಿಯ ಪ್ರದೇಶದಲ್ಲಿ, ಆ.10ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಶನಿವಾರಸಂತೆ ಹಾಗೂ ಕೊಡ್ಲಿಪೇಟೆ ಪಟ್ಟಣ ಹಾಗೂ ಸುತ್ತಮುತ್ತಲಿನ 10 ಕಿ.ಮೀ ವ್ಯಾಪ್ತಿಯ ಪ್ರದೇಶದಲ್ಲಿ, ಆ.13ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ವಿರಾಜಪೇಟೆ ನಗರ ವ್ಯಾಪ್ತಿಯ ಸುತ್ತಮುತ್ತಲಿನ 10 ಕಿ.ಮೀ ವ್ಯಾಪ್ತಿಯ ಪ್ರದೇಶದಲ್ಲಿ, ಆ.14ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಕುಶಾಲನಗರ ಪಟ್ಟಣ ವ್ಯಾಪ್ತಿಯ ಸುತ್ತಮುತ್ತಲಿನ 10 ಕಿ.ಮೀ ವ್ಯಾಪ್ತಿಯ ಪ್ರದೇಶದಲ್ಲಿ ಎಲ್ಲ ರೀತಿಯ ಮದ್ಯದಂಗಡಿ, ಬಾರ್, ಹೋಟೆಲ್ ಮತ್ತು ಕ್ಲಬ್‌ಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Share this article

ಟಾಪ್ ನ್ಯೂಸ್