ಜನವಾಹಿನಿ News ಸಿದ್ದಾಪುರ : ನಿವೇಶನ ರಹಿತರಿಗೆ ಸೂರು ಕಲ್ಪಿಸಿಕೊಡುವಂತೆ ಒತ್ತಾಯಿಸಿ ಏ 16ರಂದು ಮಾಲ್ದಾರೆ ಗ್ರಾಮ ಪಂಚಾಯತ್ ಕಛೇರಿಯ ಮುಂಭಾಗದಲ್ಲಿ ಒಂದುದಿನದ ಪ್ರತಿಭಟನೆ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿರುವುದಾಗಿ ಕೊಡಗು ಜಿಲ್ಲಾ ಜನರಲ್ ವರ್ಕರ್ಸ್ ಯುನಿಯನ್(ಸಿಐಟಿಯು) ನ ಜಿಲ್ಲಾಕಾರ್ಯದರ್ಶಿ ಮಹೇದೇವ್ ತಿಳಿಸಿದ್ದಾರೆ.
ನಗರದ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತಲೆ ತಲೆಮಾರುಗಳಿಂದ ತೋಟದ ಲೈನ್ ಮನೆಗಳಲ್ಲಿ, ಬಾಡಿಗೆ ಮನೆಗಳಲ್ಲಿ ವಾಸಿಸುವ ಬಡಕೂಲಿ ಕಾರ್ಮಿಕರಿಗೆ ಸ್ವಂತ ಸೂರು ಕಲ್ಪಸಿಕೊಡುವಲ್ಲಿ ಸರಕಾರ ವಿಫಲವಾಗಿದೆ ಎಂದು ಆರೋಪಿಸಿದ ಅವರು ಜನ ಪ್ರತಿನಿಧಿಗಳು ಚುನಾವಣೆ ಸಂಧರ್ಭದ ನೀಡಿದ ಅಶ್ವಾಸನೆಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು ಸರಕಾರಿ ಭೂಮಿಯನ್ನು ಒತ್ತುವರಿದಾರರಿಗೆ ಭೋಗ್ಯಕ್ಕೆ ನೀಡುವ ಮೂಲಕ ಸರಕಾರ ಬಡವರ ನಿವೇಶನದ ಕನಸ್ಸಿಗೆ ತಣ್ಣಿರೇರಚಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಬಿಟಿಸಿ ಎಸ್ಟೇಟ್ ನಲ್ಲಿ ಸಾಕಷ್ಟು ಪೖಸಾರಿ ಜಾಗ ಇದ್ದು ಕಂದಾಯ ಇಲಾಖಾಧಿಕಾರಿಗಳು ಮಾಲೀಕರಿಂದ ಹಣಪಡೆದು ಅವರಿಗೆ ದಾಖಲೆ ಮಾಡಿ ಕೊಡುತಿರುವುದರಿಂದ ಬಡಕೂಲಿ ಕಾರ್ಮಿಕರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದ ಅವರು ಕೂಡಲೆ ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳನ್ನು ಹುದ್ದೆಯಿಂದ ವಜಗೊಳಿಸಬೇಕು ಎಂದು ಆಗ್ರಹಿಸಿದರು.
ನಿವೇಶನ ರಹಿತರು ಜಿಲ್ಲಾಡಳಿತಕ್ಕೆ ನಿವೇಶನ ಕೋರಿ ಹಲವು ಬಾರಿ ಮನವಿ ಸಲ್ಲಿಸಿದರು ಮೌನವಹಿಸಿದ್ದು 16ರಂದು ಹಮ್ಮಿಕೊಡಿರುವ ಒಂದು ದಿನದ ಹೋರಾಟಕ್ಕೆ ಕಂದಾಯ ಇಲಾಖೆಯ ಉನ್ನತ ಅಧಿಕಾರಿಗಳು ಆಗಮಿಸಬೇಕು ಬಡಜನತೆಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಧ್ಯಕ್ಷ ಸಾಬು ಮಾತನಾಡಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಾರ್ಮಿಕರು ಸೇರಿದಂತೆ ಬಡ ಕೂಲಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು ಸಂಬಂದಪಟ್ಟವರು ಬೆಲೆ ಇಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಸಮಿತಿ ಸದಸ್ಯ ಶಿವ ಇದ್ದರು.







