Breaking News :

ಒತ್ತಡ ನಡುವೆ ಕೆಸರುಗದ್ದೆಯಲ್ಲಿ ಕಾದಾಡಲಿರುವ ಖಾಕಿ ಪಡೆ : ನಾಳೆ ಗೋಣಿಕೊಪ್ಪಲುವಿನಲ್ಲಿ ಜಿಲ್ಲಾ ಪೊಲೀಸರ ಕೆಸರುಗದ್ದೆ ಕ್ರೀಡಾಕೂಟ

ಒತ್ತಡ ನಡುವೆ ಕೆಸರುಗದ್ದೆಯಲ್ಲಿ ಕಾದಾಡಲಿರುವ ಜಿಲ್ಲಾ ಖಾಕಿ ಪಡೆ : ನಾಳೆ ಗೋಣಿಕೊಪ್ಪಲುವಿನಲ್ಲಿ ಪೊಲೀಸರ ಕೆಸರುಗದ್ದೆ ಕ್ರೀಡಾಕೂಟ – 

ಮಡಿಕೇರಿ : ಸದಾ ಒತ್ತಡಲ್ಲೇ ಕಾರ್ಯ ನಿರ್ವಹಿಸುವ ಜಿಲ್ಲೆಯ ಆರಕ್ಷಕರಿಗೆ ರಿಲಿಪ್ ನೀಡುವ ಸಲುವಾಗಿ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ, ವಿರಾಜಪೇಟೆ ಉಪ ವಿಭಾಗದ ವತಿಯಿಂದ ಪೊಲೀಸ್ ಸಿಬ್ಬಂದಿಗಳು ಹಾಗೂ ಕುಟುಂಬಸ್ಥರಿಗಾಗಿ ಇದೆ ಮೊದಲ ಬಾರಿಗೆ ಕೆಸರು ಗದ್ದೆ ಕ್ರೀಡಾಕೂಟವನ್ನು ಆಯೋಜನೆ ಮಾಡಿದೆ.

ಗೋಣಿಕೊಪ್ಪಲು ಕಾವೇರಿ ಕಾಲೇಜು ಹಿಂಭಾಗದ ಗದ್ದೆಯಲ್ಲಿ ನಾಳೆ (ಜುಲೈ 27ರಂದು) ಭಾನುವಾರ ಬೆಳಗ್ಗೆ 8.30 ಗಂಟೆಯಿಂದ ಕ್ರೀಡಾಕೂಡ ನಡೆಯಲಿದೆ.

ವಿರಾಜಪೇಟೆ ಉಪ ವಿಭಾಗದ ಡಿ.ವೈ.ಎಸ್.ಪಿ. ಮಹೇಶ್ ಕುಮಾ‌ರ್.ಎಸ್‌. ರವರ ನೇತೃತ್ವದಲ್ಲಿ ನಡೆಯುವ ಕ್ರೀಡಾಕೂಟವನ್ನು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಉದ್ಘಾಟಿಸಲಿದ್ದು, ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾಧಿಕಾರಿ ಬಿ.ಪಿ. ದಿನೇಶ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗೋಣಿಕೊಪ್ಪ ಕಾಪ್ಸ್ ಶಾಲೆ ಹಾಗೂ ಕೊಡಗು ಆಕಾಡೆಮಿ ಪಾರ್ ಎಜುಕೇಶನ್ & ಕಲ್ಟರ್ ಇದರ ಅಧ್ಯಕ್ಷೆಯಾದ ಕೆ.ಧನ್ಯ ಸುಬ್ಬಯ್ಯ, ಪಾಲ್ಗೊಳ್ಳಲಿದ್ದು, ಕ್ರೀಡಾಕೂಟಕ್ಕೆ ಜಿಲ್ಲಾ ಪೊಲೀಸ್ ಸಾಂಸ್ಕೃತಿಕ ವೇದಿಕೆ ಸಹಕಾರ ನೀಡಲಿದೆ.

ಪುರುಷರಿಗಾಗಿ 6+2 ಆಟಗಾರರನ್ನೊಳಗೊಂಡ ವಾಲಿಬಾಲ್, 7+2 ಆಟಗಾರರನ್ನೊಳಗೊಂಡ ಹಗ್ಗ ಜಗ್ಗಾಟ, 7+2 ಆಟಗಾರರನ್ನೊಳಗೊಂಡ ಕಬ್ಬಡ್ಡಿ , ಮಡಿಕೆ ಒಡೆಯುವ ಸ್ಪರ್ಧೆ, ಓಟದ ಸ್ಪರ್ಧೆ ಸ್ಪರ್ಧೆಗಳು ನಡೆಯಲಿದ್ದರೆ,

ಮಹಿಳೆಯರಿಗಗಾಗಿ ಥ್ರೋಬಾಲ್, 7+2 ಆಟಗಾರರನ್ನೊಳಗೊಂಡ ಹಗ್ಗ ಜಗ್ಗಾಟ, ಮಡಿಕೆ ಒಡೆಯುವ ಸ್ಪರ್ಧೆ, ಓಟದ ಸ್ಪರ್ಧೆ ನಡೆಯಲಿದೆ.

ಇನ್ನೂ ಮಕ್ಕಳಿಗೆ ಹಾಗೂ ಕುಟುಂಬಸ್ಥರಿಗಾಗಿ ಓಟದ ಸ್ಪರ್ಧೆ, ಹಗ್ಗ ಜಗ್ಗಾಟ, ಕಪಲ್ ರೇಸ್ ನಡೆಯಲಿದ್ದು, ಜಿಲ್ಲೆಯ ವಿವಿಧ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗಳು ಹಾಗೂ ಕುಟುಂಬಸ್ಥರು ಭಾಗವಹಿಸಲಿದ್ದಾರೆ.

 

Share this article

ಟಾಪ್ ನ್ಯೂಸ್

More News