ಜನವಾಹಿನಿ NEWS ಸಿದ್ದಾಪುರ: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಪದಾಧಿಕಾರಿಗಳು ಇಂದು ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗ್ರಾಮದ ಮೂಲಭೂತ ಸೌಕರ್ಯಗಳ ಕೊರತೆಯ ಬಗ್ಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಗ್ರಾಮದ ಬೆಟ್ಟದ ಕಾಡು ಪ್ರದೇಶದಲ್ಲಿ ಬೀದಿ ದೀಪಗಳ ಕೊರತೆ, ಹದಗೆಟ್ಟ ರಸ್ತೆಗಳು ಹಾಗೂ ಜಲಜೀವನ್ ಮಿಷನ್ ಯೋಜನೆಯಡಿ ನಿರ್ಮಾಣವಾಗಿರುವ ನೀರು ಸರಬರಾಜು ಕೇಂದ್ರದ ಕಾಮಗಾರಿ ಇನ್ನೂ ಪೂರ್ಣಗೊಳ್ಳದಿರುವುದು ಜನರಿಗೆ ತೀವ್ರ ತೊಂದರೆಯಾಗಿದ್ದು, ಕೂಡಲೇ ಈ ಸಮಸ್ಯೆಗಳನ್ನು ಬಗೆಹರಿಸಿ, ಜನರಿಗೆ ಮೂಲಭೂತ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಜಿಲ್ಲಾ ಕಾರ್ಯದರ್ಶಿ ಸುರೇಶ್ ನೆಲ್ಲಿಕಲ್, ಜಿಲ್ಲಾ ಸಲಹೆಗಾರ ಸಜೀಲ್ ಕುಮಾರ್, ನೆಲ್ಯಹುದಿಕೇರಿ ಘಟಕದ ಅಧ್ಯಕ್ಷ ಹರೀಶ್, ಉಪಾಧ್ಯಕ್ಷ ರಸಾದ್, ಕಾರ್ಯದರ್ಶಿ ನಂದ, ಹಾಗೂ ಕಾರ್ಯಕರ್ತರಾದ ಸಫೀಕ್, ರಜಿ, ಥಾಮಸ್ ಮತ್ತಿತರರು ಇದ್ದರು.
Total Views: 1







