ಜನವಾಹಿನಿ NEWS ಬೆಂಗಳೂರು : ಕರ್ನಾಟಕ ಕ್ರೀಡಾ ಪ್ರಾಧಿಕಾರದ ನೂತನ ಉಪಾಧ್ಯಕ್ಷರಾಗಿ ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿರುವ ಅಧಿಕೃತ ಕಚೇರಿಯಲ್ಲಿ, ಸನ್ಮಾನ್ಯ ಚೆಪ್ಪುಡೀರ ಅರುಣ್ ಮಾಚಯ್ಯರವರು ಪದಗ್ರಹಣಗೈದರು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್ ಭೋಸ ರಾಜು , ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಶ್ರೀಮತಿ ಕಾಂಚನ್ ಪೊನ್ನಣ್ಣ ಹಾಗೂ ಜಿಲ್ಲೆಯಿಂದ ಪದಗ್ರಹಣ ಸಮಾರಂಭಕ್ಕೆ ಸಾಕ್ಷಿಕರಿಸಲು ತೆರಳಿದ ಕಾಂಗ್ರೆಸ್ ಮುಖಂಡರುಗಳು, ಕ್ರೀಡಾ ಇಲಾಖೆಯ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಕಚೇರಿಗೆ ಪ್ರವೇಶಿಸಿದ ಕ್ರೀಡಾ ಪ್ರಾಧಿಕಾರದ ಮಾನ್ಯ ಉಪಾಧ್ಯಕ್ಷರನ್ನು ಗಣ್ಯರು ಹೂಗುಚ್ಛ ನೀಡುವ ಮೂಲಕ ಅಭಿನಂದಿಸಿದರು. ಉಸ್ತುವಾರಿ ಸಚಿವರು ಹಾಗೂ ಎ.ಎಸ್ ಪೊನ್ನಣ್ಣ ದಂಪತಿಗಳು ನೂತನ ಉಪಾಧ್ಯಕ್ಷರಿಗೆ ಯಶಸ್ಸಿನ ಶುಭಾಶಯಗಳು ಕೋರಿದರು.








