Breaking News :

ಕಾಡಾನೆ ದಾಳಿಗೆ ಸಿಲುಕಿ ಕಾರು ಜಖಂ : ಪ್ರಾಣಾಪಾಯದಿಂದ ಪಾರಾದ ಚಾಲಕ 


ಜನವಾಹಿನಿ News ಸಿದ್ದಾಪುರ : ಕಾಡಾನೆ ದಾಳಿಗೆ ಒಳಗಾಗಿ ಕಾರೊಂದು ಜಖಂ ಗೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ವಿರಾಜಪೇಟೆ ತಾಲೂಕಿನ ಸಿದ್ದಾಪುರ ವ್ಯಾಪ್ತಿಯಲ್ಲಿ ನಡೆದಿದೆ.

ಸಿದ್ದಾಪುರದ ವ್ಯಾಪ್ತಿಯ ಕೆಸನಳ್ಳ ಬಳಿ ಘಟನೆ ನಡೆದಿದ್ದು, ಪುಲಿಯೇರಿ ಗ್ರಾಮದ ನಿವಾಸಿ‌ ಪ್ರಜಿತ್‌ ಎಂಬುವವರಿಗೆ ಸೇರಿದ ಕಾರು ಜಖಂಗೊಂಡಿದೆ. ಕಾರಿನ‌ ಮೇಲೆ ಏಕಾಏಕಿ ದಾಳಿ ನಡೆಸಿದ ಕಾಡಾನೆ ಹಿಂಡು ಕಾರನ್ನು ಜಖಂಗೊಳಿಸಿವೆ.

ಸಿದ್ದಾಪುರ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಭಯಭೀತರಾಗಿರುವ ಗ್ರಾಮಸ್ಥರು ಕಾಡಾನೆ ಹಾವಳಿ ತಡೆಯಲು ಶಾಶ್ವತ ಪರಿಹಾರ ಕಲ್ಪಿಸಲು ಆಗ್ರಹಿಸಿದ್ದಾರೆ.

Share this article

ಟಾಪ್ ನ್ಯೂಸ್

More News