ಜನವಾಹಿನಿ NEWS ಮಡಿಕೇರಿ : ಕೊಡಗು ಜಿಲ್ಲೆಯ ಬೆಳೆಗಾರರಿಗೂ ಮಳೆ ಹಾನಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಪ್ರತಿಕ್ರಿಯಿಸಿದ್ದಾರೆ.
ಮಡಿಕೇರಿಯಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಉಂಟಾಗಿದೆ ಈ ಹಿನ್ನೆಲೆ ಉತ್ತರ ಭಾಗಕ್ಕೆ ಈಗಾಗಲೇ ಸಿಎಂ ಭೇಟಿ ನೀಡಿದ್ದಾರೆ.
ಎರಡೂವರೆ ಸಾವಿರ ಕೋಟಿ ಮಳೆಯಿಂದ ಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಪರಿಹಾರಕ್ಕಾಗಿ ಮೌಲ್ಯಮಾಪನ ಮಾಡಲಾಗಿದೆ. ಕೊಡಗು ಜಿಲ್ಲೆಯಲ್ಲೂ ಕಾಫಿ ಬೆಳೆಗಾರರಿಗೆ ಮಳೆಯಿಂದ ನಷ್ಟ ಆಗಿದೆ. ಹೀಗಾಗಿ ಅಧಿಕಾರಿಗಳು ಸಮೀಕ್ಷೆ ನಡೆಸಲ್ಲಿದ್ದು, ಅಧಿಕಾರಿಗಳು ಈ ಬಗ್ಗೆ ಸರಕಾರಕ್ಕೆ ವರದಿ ನೀಡಲ್ಲಿದ್ದಾರೆ ಬಳಿಕ ಬೆಳೆಗಾರರಿಗೆ ಪರಿಹಾರ ನೀಡಲು ಕ್ರಮ ವಹಿಸಲಾಗುತ್ತದೆ.
ಕಾಫಿ ಬೆಳೆಗಾರರಿಗೆ ಪರಿಹಾರ ಒದಗಿಸಲು ಕೇಂದ್ರ ಸರಕಾರ ಹಾಗೂ ಕಾಫಿ ಬೋರ್ಡ್ ಕೂಡ ಸಹಕಾರ ನೀಡಬೇಕು ಎಂದು ಮಡಿಕೇರಿಯಲ್ಲಿ ಸಚಿವ ಭೋಸರಾಜು ಹೇಳಿದರು.







