Breaking News :

ಕಿರು ಆಹಾರ ಸಂಸ್ಕರಣಾ ಉದ್ಯಮಕ್ಕೆ ವಿಫುಲ ಅವಕಾಶ – ಜಿಲ್ಲೆಯಲ್ಲಿ 15.20 ಕೋಟಿ ರೂ. ಸಾಲ ಮಂಜೂರು; ವೆಂಕಟ್ ರಾಜಾ

 


ಜನವಾಹಿನಿ NEWS ಮಡಿಕೇರಿ : ಕಿರು ಆಹಾರ ಸಂಸ್ಕರಣಾ ಉದ್ಯಮಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಹಾಯಧನ ದೊರೆಯಲಿದ್ದು, ಈ ಅವಕಾಶ ಬಳಸಿಕೊಂಡು ಸ್ವಉದ್ಯೋಗ ಕೈಗೊಳ್ಳುವತ್ತ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕರೆ ನೀಡಿದ್ದಾರೆ.

ಪ್ರಧಾನಮಂತ್ರಿಯವರ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ(ಪಿಎಂಎಫ್‍ಎಂಇ) ಯೋಜನೆ ಕುರಿತು ನಗರದ ಜಿ.ಪಂ.ಸಭಾಂಗಣದಲ್ಲಿ ಶುಕ್ರವಾರ ನಡೆದ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಆತ್ಮ ನಿರ್ಭರ ಭಾರತ ಅಭಿಯಾನದಡಿ ಕಿರು ಆಹಾರ ಸಂಸ್ಕರಣಾ ಉದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶವಿದೆ. ಆ ನಿಟ್ಟಿನಲ್ಲಿ ಸಾಲ ಸೌಲಭ್ಯ ಪಡೆದು ಮನೆಯಲ್ಲಿಯೇ ಸ್ವ ಉದ್ಯೋಗ ಕೈಗೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಸರ್ಕಾರದಿಂದ ಶೇ.50 ರಷ್ಟು ಸಹಾಯಧನ ದೊರೆಯಲಿದ್ದು, ಸಣ್ಣ ಮತ್ತು ಅತೀ ಸಣ್ಣ ಉದ್ದಿಮೆಗಳ ಬೆಳವಣಿಗೆಗೆ ಈ ಯೋಜನೆ ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹೇಳಿದರು.

ಈ ಕಿರು ಆಹಾರ ಸಂಸ್ಕರಣಾ ಉದ್ಯಮಕ್ಕೆ ಮಾರುಕಟ್ಟೆ ಸೌಲಭ್ಯ ಒದಗಿಸಿ ಎಲ್ಲೆಡೆ ವ್ಯಾಪಾರ ಆಗುವಂತೆ ನೋಡಿಕೊಳ್ಳುವುದು ಅತೀ ಮುಖ್ಯವಾಗಿದೆ. ಉತ್ತಮ ಉತ್ಪನ್ನಕ್ಕೆ ಹೆಚ್ಚಿನ ಅವಕಾಶವಿದ್ದು, ಆ ನಿಟ್ಟಿನತ್ತ ಗಮನಹರಿಸಬೇಕಿದೆ ಎಂದರು.

ಕಿರು ಆಹಾರ ಸಂಸ್ಕರಣಾ ಉದ್ಯಮದಲ್ಲಿ ಮಹಿಳೆಯರು ಹೆಚ್ಚು ತೊಡಗಿಸಿಕೊಂಡು ಸ್ವ ಉದ್ಯೋಗ ಕೈಗೊಳ್ಳಬಹುದಾಗಿದೆ. ಇದರಿಂದ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ವಾಣಿಜ್ಯ ಮತ್ತು ವ್ಯಾಪಾರವನ್ನು ಹೆಚ್ಚಿಸಲು ಸಾಧ್ಯವಾಗಲಿದೆ. ಜೊತೆಗೆ ಹಲವರಿಗೆ ಉದ್ಯೋಗ ಕಲ್ಪಿಸಿದಂತಾಗುತ್ತದೆ ಎಂದು ವೆಂಕಟ್ ರಾಜಾ ಅವರು ನುಡಿದರು.

ಸ್ಥಳೀಯ ಉತ್ಪನ್ನಗಳನ್ನು ಬಳಸಿಕೊಂಡು ಕಿರು ಆಹಾರ ಸಂಸ್ಕರಣೆಯನ್ನು ಮಾಡಬಹುದಾಗಿದೆ. ಆ ನಿಟ್ಟಿನಲ್ಲಿ ತಮಗೆ ಯಾವುದು ಅನುಕೂಲ ಅದನ್ನು ಕೈಗೊಂಡು ಯಶಸ್ಸು ಸಾಧಿಸುವತ್ತ ಮುನ್ನಡೆಯಬೇಕು ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು.

‘ಕಿರು ಆಹಾರ ಸಂಸ್ಕರಣಾ ಉದ್ಯಮಗಳ ಅಭಿವೃದ್ಧಿ ಸಂಬಂಧಿಸಿದಂತೆ ಇಲ್ಲಿ ಏರ್ಪಡಿಸಲಾಗಿರುವ ವಸ್ತು ಪ್ರದರ್ಶನದಲ್ಲಿ ಬೇಕರಿ, ಕಾಫಿ, ಅಣಬೆ, ಸಾಂಬಾರ, ಸಿರಿಧಾನ್ಯ, ಚಪಾತಿ ಹೀಗೆ ವಿವಿಧ ರೀತಿಯ ಆಹಾರ ಸಂಸ್ಕರಣೆ ಬ್ರಾಂಡೆಂಡ್ ಆಗಿದ್ದು, ಇವುಗಳಿಗೆ ದೇಶದಾದ್ಯಂತ ಮಾರುಕಟ್ಟೆ ಸೌಲಭ್ಯ ದೊರೆಯಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.’

ಇಲ್ಲಿನ ಕಿರು ಆಹಾರ ಸಂಸ್ಕರಣಾ ವಸ್ತುಪ್ರದರ್ಶನವು ಗಮನ ಸೆಳೆಯುತ್ತದೆ. ಅಷ್ಟರ ಮಟ್ಟಿಗೆ ಬ್ರಾಂಡೆಂಡ್ ಆಗಿದೆ ಎಂದು ಜಿಲ್ಲಾಧಿಕಾರಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶಿವಪ್ರಕಾಶ್ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಕಿರು ಆಹಾರ ಸಂಸ್ಕರಣಾ ಉದ್ಯಮಕ್ಕೆ ಹೆಚ್ಚಿನ ಅವಕಾಶಗಳಿದ್ದು, ಇದನ್ನು ಸರಿಯಾಗಿ ಬಳಸಿಕೊಂಡು ಹೆಚ್ಚಿನ ಉದ್ಯಮ ಸ್ಥಾಪನೆಗೆ ಮುಂದಾಗಬೇಕು ಎಂದು ಸಲಹೆ ಮಾಡಿದರು.

ಕಾಫಿ, ಕಾಳುಮೆಣಸು, ಏಲಕ್ಕಿ, ಕೋಕೋ, ಅಡಿಕೆ, ಜೇನು, ಭತ್ತ ಹೀಗೆ ಹಲವು ರೀತಿಯ ಕಿರು ಆಹಾರ ಸಂಸ್ಕರಣೆ ಉದ್ಯಮಕ್ಕೆ ಅವಕಾಶಗಳಿದ್ದು, ಇವುಗಳನ್ನು ಬಳಸಿಕೊಳ್ಳಬೇಕು. ಸಹಾಯಧನ ಕಲ್ಪಿಸಲಾಗುತ್ತಿದ್ದು, ಇದರ ಸೌಲಭ್ಯ ಪಡೆದುಕೊಳ್ಳಬೇಕು ಎಂದರು.

ಕೊಡಗು ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಅವರ ಕಿರು ಆಹಾರ ಸಂಸ್ಕರಣಾ ಉದ್ಯಮಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಕನಿಷ್ಠ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಬೇಕು. ಇಲ್ಲಿನ ಕಿರು ಆಹಾರ ಸಂಸ್ಕರಣಾ ಉದ್ಯಮ ಎಲ್ಲೆಡೆ ಫಸರಿಸಬೇಕು. ಆ ನಿಟ್ಟಿನಲ್ಲಿ ಜಿಐ ಟ್ಯಾಗ್ ಸಹ ದೊರೆಯುವಂತಾಗಬೇಕು ಎಂದು ತಿಳಿಸಿದರು.

ಕೃಷಿ, ತೋಟಗಾರಿಕೆ ಸೇರಿದಂತೆ ಹಲವು ಉತ್ಪನ್ನ ಬಳಸಿಕೊಳ್ಳಬಹುದಾಗಿದೆ. ಸರ್ಕಾರದಿಂದ ಶೇ.50 ರಷ್ಟು ಸಹಾಯಧನ ದೊರೆಯಲಿದ್ದು, ಗರಿಷ್ಠ 15 ಲಕ್ಷ ರೂ. ವರೆಗೆ ಸಹಾಯಧನ ದೊರೆಯಲಿದೆ. ಹೊಸ ಆಹಾರ ಸಂಸ್ಕರಣಾ ಉದ್ಯಮ ಪ್ರಾರಂಭಿಸಲು ಮತ್ತು ಚಾಲ್ತಿಯಲ್ಲಿರುವ ಉದ್ಯಮಗಳನ್ನು ವಿಸ್ತರಿಸಲು ಅವಕಾಶವಿದೆ ಎಂದು ಅವರು ಹೇಳಿದರು.

ಬ್ರಾಂಡಿಂಗ್ ಮತ್ತು ಮಾರುಕಟ್ಟೆ ಚಟುವಟಿಕೆಗಳಾದ ಪ್ಯಾಕೇಜಿಂಗ್, ಚಿಲ್ಲರೆ ಮಾರಾಟ ಸಂಸ್ಥೆಗಳೊಂದಿಗೆ ಒಡಂಬಡಿಕೆಗಾಗಿ ಶೇ.50 ರಷ್ಟು ಸಹಾಯಧನ ದೊರೆಯಲಿದೆ. ಸಹಕಾರಿ ಸಂಘಗಳು, ಸ್ವಸಹಾಯ ಸಂಘಗಳು ಮತ್ತು ಅವುಗಳ ಒಕ್ಕೂಟ ಹಾಗೂ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳು, ಬ್ರಾಂಡಿಂಗ್ ಮತ್ತು ಮಾರುಕಟ್ಟೆ ಸಹಾಯಧನ ದೊರೆಯಲಿದೆ ಎಂದು ಶಿವಪ್ರಕಾಶ್ ತಿಳಿಸಿದರು.

‘ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆ ಯೋಜನೆಯಡಿ ಹಿಟ್ಟಿನ ಗಿರಿಣಿ, ಎಣ್ಣೆ ಗಾಣಗಳು, ಬೇಕರಿ ಉತ್ಪನ್ನಗಳ ತಯಾರಿಕೆ, ಬಾಳೆಕಾಯಿ ಉತ್ಪನ್ನ, ಅರಿಸಿನ ಸಂಸ್ಕರಣ, ತೆಂಗಿನ ಕಾಯಿ ಉತ್ಪನ್ನ ತಯಾರಿಕೆ, ಹಪ್ಪಳ, ಸಂಡಿಗೆ, ಉಪ್ಪಿನಕಾಯಿ ತಯಾರಿಕೆ, ಚಪಾತಿ, ಕಾಫಿ ಪುಡಿ, ಮಸಾಲ ಪದಾರ್ಥ, ಚಾಕೋಲೇಟ್, ಜೇನು ಸಂಸ್ಕರಣಾ ಘಟಕ, ಹಣ್ಣು ಮತ್ತು ತರಕಾರಿ ಉತ್ಪನ್ನಗಳ ಸಂಸ್ಕರಣೆ ಈ ಘಟಕಗಳಿಗೆ ಅವಕಾಶವಿದೆ ಎಂದು ವಿವರಿಸಿದರು.’

‘ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಡಾ.ಬಿ.ಎಸ್.ಚಂದ್ರಶೇಖರ್ ಅವರು ಮಾತನಾಡಿ ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ಯಮದಡಿ ಜಿಲ್ಲೆಯಲ್ಲಿ 160 ಅರ್ಜಿಗಳು ಸಲ್ಲಿಕೆಯಾಗಿದ್ದು, 7 ಅರ್ಜಿಗಳು ಮಾತ್ರ ತಿರಸ್ಕøತಗೊಂಡಿವೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಸುಮಾರು 18.13 ಕೋಟಿಯಷ್ಟು ಯೋಜನಾ ಗುರಿಯಲ್ಲಿ 15.20 ಕೋಟಿ ರೂ. ಸಾಲ ಸೌಲಭ್ಯಕ್ಕೆ ಮಂಜೂರಾತಿ ದೊರೆತಿದೆ ಎಂದು ಮಾಹಿತಿ ನೀಡಿದರು.’

2020-21 ರಲ್ಲಿ ಈ ಯೋಜನೆ ಜಾರಿಗೆ ಬಂದಿದ್ದು, ಯಂತ್ರೋಪಕರಣ ಒದಗಿಸುವುದು, ಮಾರುಕಟ್ಟೆ ಸೌಲಭ್ಯ ಕಲ್ಪಿಸುವುದು, ಗ್ರಾಹಕರನ್ನು ಸೆಳೆಯುವುದು ಆಗಿದೆ ಎಂದರು.

ಈವರೆಗೂ ಜಿಲ್ಲೆಯಲ್ಲಿ ಈ ಯೋಜನೆಯಡಿ 89 ಉದ್ದಿಮೆದಾರರಿಗೆ ಸಾಲ ಮಂಜೂರಾತಿ ದೊರೆತಿದೆ. ಮುಖ್ಯಮಂತ್ರಿಯವರು ತಮ್ಮ 2025-26 ನೇ ಸಾಲಿನ ಆಯವ್ಯಯ ಭಾಷಣದಲ್ಲಿ 5 ಸಾವಿರ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳನ್ನು ಸ್ಥಾಪಿಸುವ ಘೋಷಣೆ ಮಾಡಿ, ಈ ಉದ್ದೇಶಕ್ಕಾಗಿ ರೂ.206 ಕೋಟಿ ಅನುದಾನವನ್ನು ಒದಗಿಸಿದ್ದಾರೆ.

ಅದರಂತೆ ಕೊಡಗು ಜಿಲ್ಲೆಗೆ 75 ಉದ್ದಿಮೆಗಳ ಸ್ಥಾಪನೆಯ ಗುರಿ ನಿಗಧಿಪಡಿಸಲಾಗಿದೆ. ಪ್ರಸಕ್ತ ಹಣಕಾಸಿನ ವರ್ಷವು ಯೋಜನೆಯ ಅನುμÁ್ಠನದ ಕೊನೆಯ ವರ್ಷವಾಗಿದ್ದು, ಈ ಯೋಜನೆಯ ಪ್ರಯೋಜನವನ್ನು ಜಿಲ್ಲೆಯಲ್ಲಿ ಹೆಚ್ಚಿನ ಫಲಾನುಭವಿಗಳು ಪಡೆದುಕೊಳ್ಳುವಂತಾಗಬೇಕು ಎಂದರು.

ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಂಗಾಧಕರ ನಾಯಕ್ ಅವರು ಮಾತನಾಡಿ ಜಿಲ್ಲೆಯಲ್ಲಿ ಕಿರು ಆಹಾರ ಸಂಸ್ಕರಣಾ ಉದ್ಯಮ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಸಲಹೆ ಮಾಡಿದರು.

ವೈಯಕ್ತಿಕ ಉದ್ಯಮಗಳು ಮತ್ತು ಗುಂಪುಗಳು, ಪ್ರಾಥಮಿಕ ಬಂಡವಾಳ, ಸಾಮಾನ್ಯ ಮೂಲ ಸೌಕರ್ಯ ಸ್ಥಾಪನೆ, ಬ್ರಾಂಡಿಂಗ್ ಮತ್ತು ಮಾರುಕಟ್ಟೆ ಸಹಾಯಧನ, ಹೀಗೆ ಹಲವು ರೀತಿಯ ಯೋಜನೆಯಡಿ ಸಹಾಯಧನ ಪಡೆಯಬಹುದಾಗಿದೆ ಎಂದರು.

ಸಿಎಫ್‍ಟಿಆರ್‍ಐನ ಹಿರಿಯ ತಾಂತ್ರಿಕ ಅಧಿಕಾರಿ ಡಾ.ರಾಘವೇಂದ್ರ ಅವರು ಜಿಲ್ಲೆಯಲ್ಲಿ ಮೌಲ್ಯವರ್ಧನೆ ಮತ್ತು ಸಂಸ್ಕರಣೆ ಅವಕಾಶಗಳ ಕುರಿತು ಮಾತನಾಡಿದರು.

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‍ನ ಸಹಾಯಕ ಮಹಾ ಪ್ರಬಂಧಕರಾದ ರಮೇಶ್ ಬಾಬು, ಸಿರಿಧಾನ್ಯಗಳ ಉತ್ಪನ್ನಗಳ ಕುರಿತು ಅರ್ಚನಾ ಕೆ.ಎಂ., ನಮಿತಾ ಅಯ್ಯಪ್ಪ, ಸಾಂಬಾರ ಪದಾರ್ಥಗಳ ಕುರಿತು ದೇವಯ್ಯ ಪಿ.ವಿ., ಸಂಪನ್ಮೂಲ ವ್ಯಕ್ತಿಗಳಾದ ನೀರಜಾ ಕೆ.ಜಿ., ಕುಮುದ ಜಯಪ್ರಶಾಂತ್ ಅವರು ಮಾತನಾಡಿದರು.

ಕೃಷಿಕರಾದ ಕೋಡಿ ಪೊನ್ನಪ್ಪ, ನಾಪಂಡ ರ್ಯಾಲಿ ಮಾದಯ್ಯ, ಇತರರು ಇದ್ದರು. ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯ ಭಿತ್ತಿ ಪತ್ರವನ್ನು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಬಿಡುಗಡೆ ಮಾಡಿದರು. ಹಾಗೂ ಸಾಲಸೌಲಭ್ಯದ ಚೆಕ್ ಅನ್ನು ಇದೇ ಸಂದರ್ಭದಲ್ಲಿ ಹಸ್ತಾಂತರಿಸಿದರು.

ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಡಾ.ಡಿ.ಎಸ್.ಸೋಮಶೇಖರ್ ಸ್ವಾಗತಿಸಿದರು, ಮೀನಾಕ್ಷಿ ಮತ್ತು ತಂಡದವರು ನಾಡಗೀತೆ ಮತ್ತು ರೈತಗೀತೆ ಹಾಡಿದರು. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಿ.ಪರಮೇಶ್ ವಂದಿಸಿದರು.

Share this article

ಟಾಪ್ ನ್ಯೂಸ್

More News