ಜನವಾಹಿನಿ NEWS ಸೋಮವಾರಪೇಟೆ : ಸಮೀಪದ ಕೂತಿ ಗ್ರಾಮದಲ್ಲಿ ಗ್ರಾಮ ಸಮಿತಿಯಿಂದ ಪ್ರತಿಷ್ಠಾಪಿಸಿದ್ದ ಗೌರಿ–ಗಣೇಶ ಮೂರ್ತಿಗಳನ್ನು ಇಂದು ಗ್ರಾಮದಲ್ಲಿ ಮೆರವಣಿಗೆ ನಡೆಸಿ ಗ್ರಾಮದ ದೇವರ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.
ಈ ಸಂದರ್ಭ ಗ್ರಾಮಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಹೆಚ್.ಎಂ. ಜಯರಾಮ್, ಉಪಾಧ್ಯಕ್ಷ ಕೆ.ಡಿ. ಗಿರೀಶ್, ಕಾರ್ಯದರ್ಶಿ ಯಾದವ್ ಕುಮಾರ್,ಖಜಾಂಚಿ ಲಕ್ಷ್ಮಯ್ಯ, ಅರ್ಚಕ ಅನಂತ್ ರಾಮ್, ಕೆ.ಎಂ. ಅಶ್ವತ್, ಸಿ.ಯು. ಭರತ್, ರಾಜೇಶ್, ಬಾನುಪ್ರಸಾದ್ ಹಾಗೂ ಗ್ರಾಮಸ್ಥರು ಇದ್ದರು.








