ಜನವಾಹಿನಿ News ಮಡಿಕೇರಿ : ಜನಿಸಿದ ಕೆಲವೇ ಗಂಟೆಗಳಲ್ಲಿ ಹೆಣ್ಣು ಶಿಶುವನ್ನು ಕಾಫಿ ತೋಟಕ್ಕೆ ಬಿಸಾಡಿರೋ ಅಮಾನವೀಯ ಕೃತ್ಯ ಕೊಡಗಿನ ಮೂರ್ನಾಡು ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಸ್ಥಳೀಯರೊಬ್ಬರಿಂದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಡಿಕೇರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದು, ಬಟ್ಟೆಯಿಲ್ಲದೆ, ಶೀತದಿಂದ ನಡುಗುತ್ತಿರುವ ಸ್ಥಿತಿಯಲ್ಲಿ ಶಿಶು ಪತ್ತೆಯಾಗಿದೆ. ಮೂರ್ನಾಡು ಸಮೀಪದ ಬೇತ್ರಿ ವ್ಯಾಪ್ತಿಯ ಹೆಮ್ಮಾಡು ಗ್ರಾಮದ ತೋಟವೊಂದರಲ್ಲಿ ಈ ಅಮಾನವೀಯ ದೃಶ್ಯ ಕಂಡುಬಂದಿದೆ. ಮಕ್ಕಳ ವಿಶೇಷ ಪೊಲೀಸ್ ಘಟಕ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಶಿಶುವಿನ ರಕ್ಷಣೆ ಮಾಡಿದ್ದು. ಜಿಲ್ಲಾಸ್ಪತ್ರೆಗೆ ದಾಖಲಿಸಿ ಶಿಶುವಿನ ಹಾರೈಕೆ ಮಾಡಲಾಗಿದೆ. ಈ ಕುರಿತು ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೃತ್ಯ ಎಸಗಿರೋ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.







