ಜನವಾಹಿನಿ NEWS ಮಡಿಕೇರಿ : ಸದನದಲ್ಲಿ ಕೊಡಗಿನ ಜನತೆ ಎದುರಿಸುತ್ತಿರುವ ಜಮ್ಮಬಾಣೆ ಹಾಗೂ ಇತರ ಕಂದಾಯ ಸಮಸ್ಯೆಗಳ ಬಗ್ಗೆ ಗಂಭೀರವಾಗಿ ಪ್ರಸ್ತಾಪಿಸಿ, ಇದರ ಶೀಘ್ರ ಇತ್ಯರ್ಥಕ್ಕಾಗಿ ಸದನ ಸಮಿತಿ ರಚನೆಯಾಗುವಂತೆ ಮಾಡಿದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಬಳಿಕ , ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಈ ಎಲ್ಲಾ ವಿಷಯಗಳ ಕುರಿತಾಗಿ ಸವಿವರವಾದ ವಿವರಣೆಯನ್ನು ನೀಡಿ, ಅತಿ ಶೀಘ್ರದಲ್ಲೇ ಇದಕ್ಕೆ ಪರಿಹಾರ ದೊರಕಿಸಿ ಕೊಡುವಂತೆ ಮನವಿ ಮಾಡಿದರು.







