ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಕಾರು ಅಪಘಾತ
ಮಡಿಕೇರಿ : ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅವರ ಕಾರು ಅಪಘಾತಕ್ಕೀಡಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ವಿರಾಜಪೇಟೆ ಕಾವೇರಿ ಕಾಲೇಜಿನ ಸಮೀಪದ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಅಪಘಾತಕ್ಕೀಡಾದ ಕಾರು ಹಾನಿಯಾಗಿದೆ.








