ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಮಾಳೇಟಿರ ತೃಪ್ತಿ ಬೋಪಣ್ಣ ನೇಮಕ
ವಿರಾಜಪೇಟೆ: ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ಮಾಳೇಟಿರ ತೃಪ್ತಿ ಬೋಪಣ್ಣ ರವರು ನೇಮಕಗೊಂಡಿರುತ್ತಾರೆ. ಇವರನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ಒಂದು ವರ್ಷದ ಅವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಲಾಗಿದೆ ಎಂದು ವಿಶ್ವವಿದ್ಯಾಲಯವು ಆದೇಶಿಸಿರುತ್ತದೆ.
ತೃಪ್ತಿ ಬೋಪಣ್ಣ ರವರು 22 ವರ್ಷಗಳ ಬೋಧನಾ ಅನುಭವವನ್ನು ಹೊಂದಿದ್ದು , ಕಳೆದ 16 ವರ್ಷಗಳಿಂದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕರ್ತವ್ಯ ವನ್ನು ಸಲ್ಲಿಸುತ್ತಿದ್ದಾರೆ.ವಾಣಿಜ್ಯ ಶಾಸ್ತ್ರ ವಿಷಯದ ಪ್ರಾದ್ಯಪಕಿಯೂ ಆಗಿರುವ ಅವರು ಈ ಹಿಂದೆ ಕಾಲೇಜಿನ ಐಕ್ಯೂಎ ಸಿ ಸಂಚಾಲಕಿಯಾಗಿಯೂ ಕಾರ್ಯನಿರ್ವಹಿಸಿರುತ್ತಾರೆ.
ಸಿಂಡಿಕೇಟ್ ಸದಸ್ಯರಾಗಿ ನಾಮ ನಿರ್ದೇಶನ ಗೊಂಡ ತೃಪ್ತಿ ಬೋಪಣ್ಣ ರವರನ್ನು ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ರಾದ ರೆ. ಫಾ. ಮದಲೈ ಮುತ್ತು ರವರು ಹಾಗೂ ಉಪನ್ಯಾಸಕರು ಅಭಿನಂದಿಸಿರುತ್ತಾರೆ.








