ಜನವಾಹಿನಿ News ಮಡಿಕೇರಿ : ಲೋಕೋಪಯೋಗಿ ಕಚೇರಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್ ರವರ ಮಡಿಕೇರಿ ಕಚೇರಿ, ಕುಶಾಲನಗರ, ಮೈಸೂರಿನ ಮನೆಗಳಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಸಂಪಾದನೆ ದೂರಿನ ಹಿನ್ನೆಲೆ ಲೋಕಾಯುಕ್ತ DYSP ದಿನಕರ್ ಶೆಟ್ಟಿ ನೇತೃತ್ವದಲ್ಲಿ ಮೈಸೂರಿನಲ್ಲಿ ದಾಳಿ ನಡೆಸಲಾಗಿದ್ದು, ಮಡಿಕೇರಿಯಲ್ಲಿ ಲೋಕಾಯುಕ್ತ ಸಬ್ ಇನ್ಸ್ಪೆಕ್ಟರ್ ವೀಣಾ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಏಕ ಕಾಲದಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಅಗತ್ಯ ದಾಖಲೆಗಳು ಹಾಗೂ ಕಡತಗಳನ್ನು ಪರಿಶೀಲಿಸಿದ್ದಾರೆ.









