Breaking News :

ಕ್ರೀಡೆಗೆ ಸರಕಾರ ಕೋಟ್ಯಾಂತರ ಅನುದಾನ ನೀಡಿದೆ ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು : ಶಾಸಕ ಪೊನ್ನಣ್ಣ


ಜನವಾಹಿನಿ News ಮಡಿಕೇರಿ : ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜನೆಗೊಂಡ, ಕೊಡವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯ ಮುಖ್ಯ ಅತಿಥಿಯಾಗಿ ಶಾಸಕರು ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ನವರು ಭಾಗವಹಿಸಿದ್ದರು.

ಕ್ರಿಕೆಟ್ ಆಟಗಾರರಿಗೆ ಶುಭ ಕೋರುತ್ತಾ ಮಾತನಾಡಿದ ಮಾನ್ಯ ಶಾಸಕರು, ಜಗತ್ತಿನಾದ್ಯಂತ ಖ್ಯಾತಿ ಪಡೆದಿರುವ ಕ್ರಿಕೆಟ್ ಪಂದ್ಯಾಟವು, ಇಂದು ದೇಶದ ಎಲ್ಲಾ ಕ್ರೀಡಾ ಪ್ರೇಮಿಗಳು ಇಷ್ಟಪಡುವ ಕ್ರೀಡೆಯಾಗಿದೆ. ನಮ್ಮ ಕೊಡಗಿನಲ್ಲಿ ಸಹ, ಇಂತಹ ಪಂದ್ಯಾವಳಿಗಳು ನಡೆಯುವುದರಿಂದ ಅನೇಕ ಕ್ರಿಕೆಟ್ ಪಟುಗಳ ಪ್ರತಿಭೆ ಅನಾವರಣಕ್ಕೆ ಸಾಕ್ಷಿಯಾಗಿದೆ ಎಂದರು.

ಕೊಡಗು ಜಿಲ್ಲೆಯಿಂದ ಹತ್ತಾರು ಶ್ರೇಷ್ಠ ಕ್ರಿಕೆಟ್ ಆಟಗಾರರು ಇಂದು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಖ್ಯಾತಿಯನ್ನು ಪಡೆದಿದ್ದಾರೆ. ಕೊಡಗಿನಲ್ಲಿ ಕ್ರೀಡೆಗೆ ಪ್ರೋತ್ಸಾಹ ನೀಡಲು ರಾಜ್ಯ ಸರ್ಕಾರವು ಜಿಲ್ಲೆಗೆ ಕೋಟ್ಯಾಂತರ ಅನುದಾನ ನೀಡಿದ್ದು, ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.

ಸದ್ಯದಲ್ಲೇ ಅಂತರಾಷ್ಟ್ರೀಯ ಗುಣಮಟ್ಟದ ಕ್ರೀಡಾ ತರಬೇತಿ ಕೇಂದ್ರಗಳು ಮೈದಾನಗಳು ಹಾಗೂ ಕ್ರೀಡಾ ವಸತಿ ನಿಲಯಗಳು ಪೊನ್ನಂಪ್ ವಿರಾಜಪೇಟೆ ಹಾಗೂ ಜಿಲ್ಲೆಯ ಇತರ ಭಾಗಗಳಲ್ಲೂ ಕ್ರೀಡಾಳುಗಳ ಅನುಕೂಲಕ್ಕೆ ಲಭ್ಯವಾಗಲಿದೆ ಎಂದು ಶಾಸಕರು ತಿಳಿಸಿದರು.

ಪಂದ್ಯಾಟದಲ್ಲಿ ಭಾಗವಹಿಸುತ್ತಿರುವ ಎಲ್ಲಾ ತಂಡಗಳಿಗೆ ಯಶಸ್ಸಿನ ಶುಭಾಶಯಗಳು ಕೋರಿದ ಶಾಸಕರು, ಕ್ರೀಡೆಯನ್ನು ಅದರ ನೈಜ ರೀತಿಯಲ್ಲಿ ಆಸ್ವಾದಿಸುತ್ತಾ ಸಮಾಜದಲ್ಲಿ ಸಾಮರಸ್ಯ ಸಾಧಿಸಲು ಎಲ್ಲರೂ ಪ್ರಯತ್ನಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ವೇದಿಕೆ ಮೇಲೆ ಉಪಸ್ಥಿತರಿರುವ ಎಲ್ಲಾ ಗಣ್ಯರು, ಕಾರ್ಯಕ್ರಮ ಆಯೋಜಕರು ಹಾಗೂ ಕ್ರೀಡಾ ಪ್ರೇಮಿಗಳು ಉಪಸ್ಥಿತರಿದ್ದರು.

Share this article

ಟಾಪ್ ನ್ಯೂಸ್

More News