Breaking News :

ಗಡಿಗ್ರಾಮ ಕರಿಕೆಯಲ್ಲಿ ಅದ್ದೂರಿ ಗೌರಿ ಗಣೇಶೋತ್ಸವ ಆಚರಣೆ


ಜನವಾಹಿನಿ NEWS ಮಡಿಕೇರಿ
ಗಡಿ ಗ್ರಾಮ ಕರಿಕೆಯ ಎಳ್ಳುಕೊಚ್ಚಿ ಹಾಗೂ ಚೆತ್ತುಕಾಯದಲ್ಲಿ ಗೌರಿ ಗಣೇಶೋತ್ಸವ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ  ವಿಸರ್ಜನೆ ಕಾರ್ಯ ವಿಜೃಂಭಣೆಯಿಂದ ನಡೆಯಿತು.

ಎಳ್ಳುಕೊಚ್ಚಿ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣ ಹಾಗೂ ಚೆತ್ತುಕಾಯದ ನ್ಯೂಪ್ರೆಂಡ್ಸ್ ಕ್ಲಬ್ ವತಿಯಿಂದ ಇಲ್ಲಿನ ಶಾಲಾ ಮೈದಾನದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೂಡ ಆಯೋಜನೆ ಮಾಡಲಾಗಿತು.
ಗಣೇಶೋತ್ಸವ ಸಂಭ್ರಮದಲ್ಲಿ ಸ್ಥಳೀಯರು ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಘ್ನ ನಿವಾರಕನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬೆಳಗ್ಗೆ ಗಣಪತಿ, ಮಂಗಳಾರತಿ, ನೈವೇದ್ಯ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸುವ ಮೂಲಕ ಪ್ರತಿಷ್ಠಾಪನೆ ಮಾಡಲಾದ ಮೂರ್ತಿಗಳನ್ನು ಸಂಜೆ ವಿದ್ಯುತ್ ಅಲಂಕೃತ ಭವ್ಯ ಮಂಟಪದಲ್ಲಿ ಮೆರವಣಿಗೆ ಮೂಲಕ ಸಾಗಿಸಿ ಕರಿಕೆ ಹೊಳೆಯಲ್ಲಿ ಸಾಂಪ್ರದಾಯಿಕ ವಿಧಿವಿಧಾನಗಳನ್ನು ನೆರವೇರಿಸಿ ಅದ್ದೂರಿಯಾಗಿ ವಿಸರ್ಜಿಸಲಾಯಿತು.

ಉತ್ಸವದಲ್ಲಿ ಪಾಲ್ಗೊಂಡಿದ್ದ ಭಕ್ತರಿಗೆ ಅನ್ನಸಂತರ್ಪಣೆ ಮಾಡಲಾಯಿತು.

Share this article

ಟಾಪ್ ನ್ಯೂಸ್

More News