Breaking News :

ಗದ್ದುಗೆಬೆಟ್ಟ ದೇವಾಲಯದ ಬಳಿ ಅಕ್ರಮ ಕಬರ್ ಆರೋಪ: ರಸ್ತೆ ತಡೆ ಪ್ರತಿಭಟನೆ

 

 


ಜನವಾಹಿನಿ NEWS ಸಿದ್ದಾಪುರ : ಮಾಲ್ದಾರೆ ಸಮೀಪದ ಗದ್ದುಗೆಬೆಟ್ಟದ ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಅನ್ಯಕೋಮಿನವರು ಅಕ್ರಮವಾಗಿ ಕಬರ್ ನಿರ್ಮಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ದೇವಾಲಯದ ಸಮೀಪ ನಿರ್ಮಿಸಲಾಗಿದ್ದ ಕಬರ್‌ನ್ನು ತೆರವುಗೊಳಿಸಿ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದರು. ಆರ್‌ಎಸ್‌ಎಸ್ ಪ್ರಮುಖ ಚಕ್ಕೆರ ಮನು ಮಾತನಾಡಿ, 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿ ಅರಣ್ಯ ಇಲಾಖೆ ಅಧಿಕಾರಿಗಳ ಪಾತ್ರದ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ರವಿ ಕುಶಾಲಪ್ಪ ಮಾತನಾಡಿ, ಜಿಲ್ಲೆಯ ದೇವಾಲಯಗಳ ವಿರುದ್ಧ ಸಂಚು ನಡೆಯುತ್ತಿದೆ ಎಂದು ಆರೋಪಿಸಿ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಒತ್ತಾಯಿಸಿದರು.
ಸ್ಥಳಕ್ಕೆ ಆಗಮಿಸಿದ ಎಸಿಎಫ್ ನವೀನ್ ಕುಮಾರ್ ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಬಳಿಕ ಡಿವೈಎಸ್‌ಪಿ ಸೂರಜ್ ಅವರ ಸೂಚನೆಯಂತೆ ಸ್ಥಳದಲ್ಲೇ ದೂರು ದಾಖಲಿಸಿ ಎಫ್‌ಐಆರ್ ದಾಖಲಿಸಲು ಅಧಿಕಾರಿಗಳು ಒಪ್ಪಿದ ನಂತರ ಪ್ರತಿಭಟನಾಕಾರರು ರಸ್ತೆ ತಡೆ ಹಿಂಪಡೆದರು.

ಪ್ರತಿಭಟನೆಯಲ್ಲಿ ರಾಬಿನ್ ದೇವಯ್ಯ, ನೆಲ್ಲಿರ ಚಲನ್, ಕಿಲನ್ ಗಣಪತಿ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು. ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

 

Share this article

ಟಾಪ್ ನ್ಯೂಸ್

More News