Breaking News :

ಗುಹ್ಯ ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭೋತ್ಸವ

ಸಿದ್ದಾಪುರ : ಕನ್ನಡ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮ (ದ್ವಿಭಾಷ ) ಪ್ರಾರಂಭೋತ್ಸವ ಗುಹ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಶಿಕ್ಷಕಿ ಮಂಜುಳ ಮಾತನಾಡಿ ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚು ಹೊತ್ತು ನೀಡುತ್ತಿದ್ದು ವಿದ್ಯಾರ್ಥಿಗಳಿಗೆ ಹಲವಾರು ಯೋಜನೆಗಳನ್ನು ನೀಡಿದೆ. ಇದರ ಸದುಪಯೋಗಪಡಿಸಿಕೊಳ್ಳುವುದರ ಮೂಲಕ ಕನ್ನಡ ಮಾಧ್ಯಮದೊಂದಿಗೆ ಆಂಗ್ಲ ಮಾಧ್ಯಮವು ಪ್ರಾರಂಭವಾಗಿದ್ದು ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳಿಸುವುದರ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಈ ಸಂದರ್ಭಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾದ ಲಕ್ಷ್ಮಿ, ಸೌಮ್ಯ, ರೂಪ, ಪದವೀಧರ ಪ್ರಾಥಮಿಕ ಶಿಕ್ಷಕ ಶ್ರೀನಿವಾಸ,ಸಹ ಶಿಕ್ಷಕಿಯರಾದ ನೇತ್ರಾವತಿ,ಜಾನ್ಸಿ ಸೇರಿದಂತೆ ವಿದ್ಯಾರ್ಥಿಗಳು ಪೋಷಕರು ಹಾಜರಿದ್ದರು.

Share this article

ಟಾಪ್ ನ್ಯೂಸ್

More News