Breaking News :

ಛತ್ತೀಸಗಢದಲ್ಲಿ ಕ್ರೈಸ್ತ ಸನ್ಯಾಸಿಗಳ ಬಂಧನ ಹಾಗೂ ದೌರ್ಜನ್ಯ ಖಂಡಿಸಿ ಸಿದ್ದಾಪುರದಲ್ಲಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

 


ಛತ್ತೀಸಗಢದಲ್ಲಿ ಕ್ರೈಸ್ತ ಸನ್ಯಾಸಿಗಳ ಬಂಧನ ಹಾಗೂ ದೌರ್ಜನ್ಯ ಖಂಡಿಸಿ ಸಿದ್ದಾಪುರದಲ್ಲಿ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ


ಸಿದ್ದಾಪುರ : ಛತ್ತೀಸಗಢದಲ್ಲಿ ಇಬ್ಬರು ಕ್ಯಾಥೊಲಿಕ್‌ ಸನ್ಯಾಸಿನಿಯರ ಬಂಧನ ಹಾಗೂ ಕ್ರೈಸ್ತರ ಮೇಲಿನ ದೌರ್ಜನ್ಯ ಖಂಡಿಸಿ ಸಿದ್ದಾಪುರ ಪ್ರಗತಿಪರ ಸಂಘಟನೆಗಳಿಂದ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು.
ನಗರದ ಬಸ್ ನಿಲ್ದಾಣದಲ್ಲಿ ಜಮಾವಣೆಗೊಂಡ ಪ್ರಗತಿಪರ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ದೌರ್ಜನ್ಯ ಹೆಚ್ಚುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಛತ್ತೀಸಗಢ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಪ್ರತಿಭಟನೆ ವೇಳೆ ಮಾತನಾಡಿದ ಸಂಘಟನೆಗಳ ಪ್ರಮುಖರು, ಬಲಪಂಥೀಯ ಕಾರ್ಯಕರ್ತರ ಸುಳ್ಳು ದೂರಿನ ಆಧಾರದ ಮೇಲೆ ಕೇರಳ ಮೂಲದ ಕ್ರೈಸ್ತ ಸನ್ಯಾಸಿಗಳನ್ನು ಬಂಧಿಸಿ ದೌರ್ಜನ್ಯ ಎಸಗಲಾಗಿದೆ.
ದೇಶದ ವಿವಿಧೆಡೆ ಇತ್ತೀಚಿನ ವರ್ಷಗಳಲ್ಲಿ ಕ್ರೈಸ್ತ ಸಮುದಾಯದ ಮೇಲೆ ನಿರಂತರ ದಾಳಿಗಳು ನಡೆಯುತ್ತಿದ್ದು, ವಿವಿಧ ಸಂಘಟನೆಗಳು ಕ್ರೈಸ್ತ ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಸ್ಥೆಗಳ ಮೇಲೆ ಸುಳ್ಳು ಆರೋಪ ಹೊರಿಸುವುದು ಸಾಮಾನ್ಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡ ನಡೆಯುತ್ತಿರುವ ದಾಳಿಗಳ ಬಗ್ಗೆ ಕೇಂದ್ರ ಸರಕಾರ ಕೂಡಲೇ ಮಧ್ಯಪ್ರವೇಶಿಸಿ ಸೂಕ್ತ ರಕ್ಷಣೆ ಒದಗಿಸಬೇಕೆಂದು ಆಗ್ರಹಿಸಿದ ಪ್ರಭಟನಕಾರರು ದಶಕಗಳಿಂದ ದೇಶದ ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಸೇವಾ ಕ್ಷೇತ್ರಗಳಲ್ಲಿ ತಮ್ಮನ್ನು ಅರ್ಪಿಸಿಕೊಂಡಿರುವ ಕ್ರೈಸ್ತ ಸನ್ಯಾಸಿಗಳನ್ನು ನಡೆಸಿಕೊಂಡಿರುವ ರೀತಿ ನಾಗರಿಕ ಸಮಾಜ ಒಪ್ಪುವಂತದಲ್ಲ ಎಂದರು.

ಪ್ರತಿಭಟನೆಯಲ್ಲಿ ಸಮಾನ ಮನಸ್ಕಾರ ವೇದಿಕೆ ಮುಖಂಡರುಗಳಾದ ಎನ್.ಡಿ.ಕುಟ್ಟಪ್ಪ , ಎಂ.ಎಸ್.ವೆಂಕಟೇಶ್, ಅಬ್ದುಲ್ ಮಜೀದ್, ಪಿ.ವಿ.ಜಾನ್ಸನ್, ಎನ್.ಕೆ.ಅನಿಲ್ ,ರಮೇಶ್.ಹೆಚ.ಬಿ, ಮುಸ್ತಫ, ಜಿಮ್ಮಿ ಸಿಕ್ವೆರಾ, ಜೋಸೆಫ್ ಸ್ಯಾಮ್, ಬೈಜು.ಎಸ್, ಪಿ.ಆರ್.ಭರತ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

Share this article

ಟಾಪ್ ನ್ಯೂಸ್

More News