ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ
ಮಡಿಕೇರಿ : ಕೊಡಗು ಜಿಲ್ಲಾಡಳಿತ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯು ನಗರದ ಕೋಟೆ ಆವರಣದಲ್ಲಿ ಮಳೆಯ ನಡುವೆ ಶುಕ್ರವಾರ ಅರ್ಥಪೂರ್ಣ ನಡೆಯಿತು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಿದರು.
ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಇತರರು ಇದ್ದರು.









