Breaking News :

ಜಿಲ್ಲೆಯಲ್ಲಿ ಮುಂದುವರೆದ ಆನೆ ಮಾನವ ಸಂಘರ್ಷ ; ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ : ಪೊನ್ನಂಪೇಟೆಯಲ್ಲಿ ಘಟನೆ

 


ಜನವಾಹಿನಿ News ಮಡಿಕೇರಿ : ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ನಡೆದಿದೆ.

ಆನೆ ದಾಳಿಯಲ್ಲಿ ಸಾವನ್ನಪ್ಪಿದವರನ್ನು ಕಾಯಿಮಾನಿ ನಿವಾಸಿ ರತ್ತು ಎಂದು ಗುರುತಿಸಲಾಗಿದೆ.

ಇಂದು (ಏ.8) ಬೆಳ್ಳಂಬೆಳಗ್ಗೆ ರತ್ತು ಅವರು ಕುರ್ಚಿ-ಕಾಯಿಮಾನಿ ನಡುವೆ ಇರುವ ತಮ್ಮ ಕಾಫಿ ತೋಟಕ್ಕೆ ಎಂದಿನಂತೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಏಕಾಏಕಿ ಎದುರಾದ ಕಾಡಾನೆ ಅವರ ಮೇಲೆ ದಾಳಿ ನಡೆಸಿ, ತುಳಿದು ಸಾಯಿಸಿದೆ ಎನ್ನಲಾಗಿದೆ. ರತ್ತು ರವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕುಟ್ಟ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ಶ್ರೀಮಂಗಲ ಹೋಬಳಿಯ ಕುರ್ಚಿ ಮತ್ತು ಕಾಯಿಮಾನಿ ಭಾಗದಲ್ಲಿ ಸುಮಾರು 8 ರಿಂದ 10 ಕಾಡಾನೆಗಳ ಹಿಂಡು ಬೀಡುಬಿಟ್ಟಿವೆ. ಹಾಡಹಗಲೇ ಆನೆಗಳು ಪ್ರತ್ಯಕ್ಷವಾಗುತ್ತಿರುವುದರಿಂದ ತೋಟ ಕೆಲಸಕ್ಕೆ ಹೋಗಲು ಕಾರ್ಮಿಕರು ಹಾಗೂ ಬೆಳೆಗಾರರು ಭಯಪಡುತ್ತಿದ್ದು, ಅರಣ್ಯ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು ಈ ಆನೆಗಳ ಹಿಂಡನ್ನು ಕಾಡಿಗಟ್ಟಬೇಕು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share this article

ಟಾಪ್ ನ್ಯೂಸ್

More News