Breaking News :

ನಾಳೆ ದಿ.ಕೊಕ್ಕಲೆರ ಚಂಗಪ್ಪ ಅವರ ಜ್ಞಾಪಕಾರ್ಥ ದತ್ತಿನಿಧಿ ಸ್ವೀಕಾರ : ಹಿರಿಯ ಸಾಹಿತಿ ಕಿಗ್ಗಾಲು ಎಸ್.ಗಿರೀಶ್ ಅವರ ಪುಸ್ತಕ ಬಿಡುಗಡೆ

ನಾಳೆ ದಿ.ಕೊಕ್ಕಲೆರ ಚಂಗಪ್ಪ ಅವರ ಜ್ಞಾಪಕಾರ್ಥ ದತ್ತಿನಿಧಿ ಸ್ವೀಕಾರ : ಹಿರಿಯ ಸಾಹಿತಿ ಕಿಗ್ಗಾಲು ಎಸ್.ಗಿರೀಶ್ ಅವರ ಪುಸ್ತಕ ಬಿಡುಗಡೆ

ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮೂರ್ನಾಡು ಹೋಬಳಿ ಘಟಕದ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮೂರ್ನಾಡು ಪಿಎಂ.ಶ್ರೀ ಮಾದರಿ ಪ್ರಾಥಮಿಕ ಶಾಲೆ ಇವರ ಸಂಯುಕ್ತಾಶ್ರಯದಲ್ಲಿ ದಿ.ಕೊಕ್ಕಲೆರ ಚಂಗಪ್ಪ ಅವರ ಜ್ಞಾಪಕಾರ್ಥವಾಗಿ ದತ್ತಿನಿಧಿ ಸ್ವೀಕಾರ, ಜಿಲ್ಲೆಯ ಹಿರಿಯ ಸಾಹಿತಿ ಕಿಗ್ಗಾಲು ಎಸ್.ಗಿರೀಶ್ ಅವರ ಪುಸ್ತಕ ಬಿಡುಗಡೆ ಹಾಗೂ ಮೂರ್ನಾಡು ಹೋಬಳಿ ಘಟಕದ ಶಿಕ್ಷಕರಿಗೆ “ಕನ್ನಡ ಭಾಷೆಯ ಬೆಳವಣಿಗೆಗಾಗಿ ಮಾರ್ಗೋಪಾಯಗಳು” ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆಯ ವಿಜೇತರುಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮವು ನಾಳೆ ಬೆಳಗ್ಗೆ 10.30 ಗಂಟೆಗೆ ಮೂರ್ನಾಡುವಿನ ಪಿಎಂ ಶ್ರೀ ಮಾದರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ.  

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷರಾದ ಈರಮಂಡ ಹರಿಣಿ ವಿಜಯ್ ವಹಿಸಲಿದ್ದು, ಉದ್ಘಾಟಕರಾಗಿ ನಿವೃತ್ತ ದೈಹಿಕ ಶಿಕ್ಷಕ ಹಾಗೂ ಕಾಫಿ ಬೆಳೆಗಾರರಾದ ಕಂಬೀರಂಡ ಕಿಟ್ಟು ಕಾಳಪ್ಪ, ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷರಾದ ಕೇಶವಕಾಮತ್, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್, ದತ್ತಿ ನಿಧಿ ಸ್ಥಾಪಕರಾದ ಕೊಕ್ಕಲೆರ ಬೋಜಮ್ಮ ಚಂಗಪ್ಪ, ಮೂರ್ನಾಡು ಗ್ರಾ,ಪಂ. ಅಧ್ಯಕ್ಷರಾದ ಕುಶನ್ ರೈ, ಹೊದ್ದೂರು ಗ್ರಾ.ಪಂ.ಅಧ್ಯಕ್ಷರಾದ ಎಚ್.ಎ.ಹಂಸ, ಮೂರ್ನಾಡು ಪಿಎಂ ಶ್ರೀ ಶಾಲಾ ಮುಖ್ಯೋಪಾಧ್ಯಾಯನಿ ಬಿ.ಎನ್.ಪುಷ್ಪಾವತಿ ಹಾಗೂ ಪ್ರಬಂಧ ತೀರ್ಪುಗಾರರಾದ ಹಿರಿಯ ಸಾಹಿತಿ ಕಿಗ್ಗಾಲು ಎಸ್.ಗಿರೀಶ್, ಶಕ್ತಿ ದಿನಪತ್ರಿಕೆ ಉಪ ಸಂಪಾದಕರು ಹಾಗೂ ಮಡಿಕೇರಿ ತಾಲೂಕು ಕಸಾಪ ಮಾಜಿ ಅಧ್ಯಕ್ಷ ಕುಡೆಕಲ್ ಸಂತೋμï, ಸಾಹಿತಿ ಹಾಗೂ ನಿವೃತ್ತ ಪ್ರಾಧ್ಯಾಪಕಿ ದಂಬೇಕೋಡಿ ಸುಶೀಲ, ಇತರರು ಪಾಲ್ಗೊಳ್ಳಲಿದ್ದಾರೆ.

ಮೂರ್ನಾಡು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಕಟ್ಟೆಮನೆ ಮಹಾಲಕ್ಷ್ಮಿ, ಕೋಶಾಧಿಕಾರಿ ಮಡೆಯಂಡ ಸೂರಜ್, ಸಂಘಟನಾ ಕಾರ್ಯದರ್ಶಿ ಗಳಾದ ಕೊಂಪುಳಿರ ಮಮತ, ಕೆ.ಎ.ಅಬ್ದುಲ್ ಖಾದರ್, ಸಹ ಕಾರ್ಯದರ್ಶಿ ಅಪ್ಪಚಂಡ ಸುಚಿತಾ ಅವರು ಉಪಸ್ಥಿತರಿರಲಿದ್ದಾರೆ.

 

 

Share this article

ಟಾಪ್ ನ್ಯೂಸ್

More News