Breaking News :

ಜೂ.05 ರಂದು ನೇರ ಸಂದರ್ಶನ

 


ಜನವಾಹಿನಿ NEWS ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್, 05 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಈ ನೇರ ಸಂದರ್ಶನದಲ್ಲಿ ‘ಕಲ್ಯಾಣಿ ಮೋಟಾರ್ಸ್ ಮಡಿಕೇರಿ’ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಈ ನೇರ ಸಂದರ್ಶನದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ., ಐಟಿಐ, ಡಿಪ್ಲೋಮ, ಪದವಿ ಹಾಗೂ ಸ್ನಾತಕೋತರ ಪದವಿ. ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೇರವನ್ನು ಪಡೆಯಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ 8296020826 ಇವರನ್ನು ಸಂಪರ್ಕಿಸಬಹುದು.

Share this article

ಟಾಪ್ ನ್ಯೂಸ್

More News