ಜನವಾಹಿನಿ News ಪೊನ್ನಂಪೇಟೆ : ಈ ಬಾರಿಯ ಬೇಸಿಗೆ ಕಾಲದಲ್ಲಿ ಸಾರ್ವಜನಿಕರು ನೀರಿನ ಅಭಾವದಿಂದ ಬಳಲಬಾರದು ಎಂಬ ಸದುದ್ದೇಶದಿಂದ ಕ್ಷೇತ್ರದ ಶಾಸಕರು ತಮ್ಮ 28ಲಕ್ಷ ವೆಚ್ಚದ ವೈಯುಕ್ತಿಕ ಅನುದಾನದಲ್ಲಿ ಪೊನ್ನಂಪೇಟೆ ಭಾಗದಲ್ಲಿ ಅಗತ್ಯ ಇರುವ ಸಾರ್ವಜನಿಕರಿಗೆ ತುತ್ತು ನೀರಿನ ಸೌಲಭ್ಯ ಕಲ್ಪಿಸಲು ಟ್ಯಾಂಕರ್ ವಾಹನವನ್ನು ವ್ಯವಸ್ಥೆ ಮಾಡಿದ್ದಾರೆ.
ಪೊನ್ನಂಪೇಟೆಯಲ್ಲಿ ಟ್ಯಾಂಕರ್ ವಾಹನವನ್ನು ಉದ್ಘಾಟಿಸಿ ಶುಭ ಹಾರೈಸಿ ಮಾತನಾಡಿದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ , ತೀವ್ರ ಬೇಸಿಗೆಯಿಂದ ನೀರಿನ ಅಭಾವ ತಲೆದೋರಿದ್ದು, ಸಾರ್ವಜನಿಕರಿಗೆ ನೀರಿನ ಅಭಾವ ಆಗದಂತೆ ನೋಡಿಕೊಳ್ಳಲು ಈ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.







