ಜನವಾಹಿನಿ News ಸೋಮವಾರಪೇಟೆ : ಸೋಮವಾರಪೇಟೆ ಸಮೀಪದ ತೋಳುರುಶೆಟ್ಟಳ್ಳಿ ಗ್ರಾಮದಲ್ಲಿ ಅಗ್ನಿ ಅವಘಡ ಸಂಭವಿಸಿ ಮಾಜಿ ಸಿಆರ್ಪಿಎಫ್ ಯೋಧ ಹೆಚ್.ಎ. ವೆಂಕಟೇಶ್ (64) ಸಾವನ್ನಪ್ಪಿದ್ದಾರೆ. ಮನೆಯಲ್ಲಿ ತೋಟ ಯಂತ್ರಗಳಿಗೆಂದು ಸಂಗ್ರಹಿಸಿದ್ದ ಪೆಟ್ರೋಲ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಬೆಂಕಿ ವೇಗವಾಗಿ ವ್ಯಾಪಿಸಿವೆ. ಗ್ಯಾಂಗ್ರಿನ್ ಸಮಸ್ಯೆಯಿಂದಾಗಿ ಒಂದು ಕಾಲು ಕಳೆದುಕೊಂಡಿದ್ದ ವೆಂಕಟೇಶ್ ಅವರು ತಕ್ಷಣ ಹೊರಬರಲು ಸಾಧ್ಯವಾಗದೆ ಬೆಂಕಿಗೆ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬೆಂಕಿಯಿಂದ ಮನೆಯ ಒಂದು ಭಾಗ ಸಂಪೂರ್ಣ ಸುಟ್ಟು ಕರಕಲಾಗಿದೆ. ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ಧಾವಿಸಿ ನೆರವಾದರೂ ಪ್ರಯೋಜನವಾಗಲಿಲ್ಲ. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.






