Breaking News :

ದೂರು ನೀಡಿದರೂ ಆರೋಪಿ ವಿರುದ್ಧ ಕ್ರಮ ಕೈಗೊಂಡಿಲ್ಲ : ದಲಿತ ಸಂಘರ್ಷ ಸಮಿತಿ ಆರೋಪ

ಮಡಿಕೇರಿ : ಜಾತಿ ನಿಂದನೆ ಮತ್ತು ಅವಾಚ್ಯ ಶಬ್ಧಗಳಿಂದ ನಿಂದಿಸಿದ ವ್ಯಕ್ತಿಯ ವಿರುದ್ಧ ದೂರು ನೀಡಿದ್ದರು ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದಲಿತ ಸಂಘರ್ಷ ಸಮಿತಿ ಆರೋಪಿಸಿದೆ.

 

ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಜಿಲ್ಲಾ ಸಂಚಾಲಕ ಸಿ.ಸಿ.ಲೋಕೇಶ್, ಇತ್ತೀಚೆಗೆ ಸಮಿತಿಯ ಜಿಲ್ಲಾ ಸಂಚಾಲಕರಾದ ಡಿ.ಜೆ.ಈರಪ್ಪ ಅವರು ನಾಕಲಗೂಡುದಿಂದ ಕೆಲಸಗಾರರೊಬ್ಬರನ್ನು ಕರೆತರಲು ತೆಳಿದ್ದರು. ಈ ಸಂದರ್ಭ ಕೆಲಸಗಾರ ಬರುವವರೆಗೆ ರಸ್ತೆ ಬದಿಯಲ್ಲಿ ಕಾರು ನಿಲುಗಡೆಗೊಳಿಸಿದ್ದರು. ಈ ಸಂದರ್ಭ ವ್ಯಕ್ತಿಯೊಬ್ಬ ಕಾರಿನಲ್ಲಿ ಬಂದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಪೊಲೀಸ್ ಇಲಾಖೆಗೆ ದೂರು ನೀಡಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ. ಅಸ್ಪೃಶ್ಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

 

ಸಮಿತಿಯ ಜಿಲ್ಲಾ ಸಂಚಾಲಕರಾದ ಡಿ.ಜೆ.ಈರಪ್ಪ ಮಾತನಾಡಿ, ಹಿಂದೆಯೂ ಈ ವ್ಯಕ್ತಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಈ ಸಂಬಂಧ ದೂರು ನೀಡಲಾಗಿತ್ತು. ಅಂದು ಕೂಡ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈ ವ್ಯಕ್ತಿಯಿಂದ ಕೊಲೆ ಬೆದರಿಕೆ ಕೂಡ ಇದ್ದು, ಏನಾದರೂ ಅಹಿತಕರ ಘಟನೆ ಸಂಭವಿಸಿದ್ದಲ್ಲಿ ಪೊಲೀಸ್ ಇಲಾಖೆ ನೇರಹೊಣೆ ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಶನಿವಾರಸಂತೆ ಹೋಬಳಿಯ ಸಂಚಾಲಕ ರೋಹಿತ್, ಸದಸ್ಯರಾದ ಸುದರ್ಶನ್ ಉಪಸ್ಥಿತರಿದ್ದರು.

Share this article

ಟಾಪ್ ನ್ಯೂಸ್

More News