Breaking News :

ದೆಹಲಿಯಲ್ಲಿ ಸ್ಫೋಟ ಹಿನ್ನೆಲೆ ಕೊಡಗಿನಲ್ಲೂ ಕಟ್ಟೆಚ್ಚರ – ವಿವಿಧ ಕಡೆ ಶೋಧ ಕಾರ್ಯ 

 


ಜನವಾಹಿನಿ News ಮಡಿಕೇರಿ : ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದ ಹಿನ್ನೆಲೆಯಲ್ಲಿ, ಕರ್ನಾಟಕದಾದ್ಯಂತ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ.

ರಾಜ್ಯದ ಎಲ್ಲಾ ನಗರಗಳಲ್ಲಿ ತಪಾಸಣೆ, ಗಸ್ತು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಬಿಗಿ ಭದ್ರತೆಯನ್ನು ಹೆಚ್ಚಿಸಲು ಆದೇಶಿಸಲಾಗಿದೆ. ಈ ಹಿನ್ನೆಲೆ ಕೊಡಗಿನ ಜನನಿಬಿಡ ಪ್ರದೇಶಗಳಲ್ಲಿ, ಸರ್ಕಾರಿ ಬಸ್ಸು ನಿಲ್ದಾಣ, ರಾಜಾಸೀಟು ಸೇರಿದಂತೆ ಎಲ್ಲಾ ಪ್ರವಾಸಿ ತಾಣಗಳಲ್ಲಿ ಬಾಂಬ್ ನಿಷ್ಕ್ರಿಯ ದಳ, ಡಾಗ್ ಸ್ಕ್ವಾಡ್ ನಿಂದ ಪರಿಶೀಲನೆ ನಡೆಸಿದ್ದು, ವಿಶೇಷ ನಿಗಾ ವಹಿಸಲಾಗಿದೆ. ಮಡಿಕೇರಿ ಬಸ್ಸು ನಿಲ್ದಾಣದಲ್ಲಿದ್ದ ಅಸ್ಸಾಂ ಕಾರ್ಮಿಕರನ್ನು ಕೂಡ ಪರಿಶೀಲಿಸಿದ್ದಾರೆ.

ಎಲ್ಲೆಡೆ ಎಚ್ಚರ ವಹಿಸಿರುವ ಬಾಂಬ್ ಸ್ಕ್ವಾಡ್, ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Share this article

ಟಾಪ್ ನ್ಯೂಸ್

More News