ದೇವರಕೊಲ್ಲಿ ಬಳಿ ಭೀಕರ ಅಪಘಾತ ನಾಲ್ವರು ದಾರುಣ ಸಾವು
ಮಡಿಕೇರಿ : ಮಡಿಕೇರಿ ಸಮೀಪದ ದೇವರ ಕೊಲ್ಲಿ ಬಳಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ.
ಘಟನಾ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಮತ್ತಿಬ್ಬರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ.
ಅಪಘಾತಕ್ಕೊಳಗಾದ ಕಾರು ಕೊಡಗು ಜಿಲ್ಲೆ ಗೋಣಿಕೊಪ್ಪ ಮೂಲದ್ದೆಂದು ತಿಳಿದು ಬಂದಿದ್ದು, ಮೃತಪಟ್ಟವರನ್ನು ನಿಹಾದ್, ರಿಷಾನ್, ಮತ್ತು ರಾಶಿಬ್ ಎಂದು ಗುರುತಿಸಲಾಗಿದೆ. ಮತ್ತೋರ್ವ ಮೃತ ಯುವಕನ ಹೆಸರು ಇನ್ನಷ್ಟೇ ತಿಳಿಯಬೇಕಾಗಿದೆ. ಕಾರಿನಲ್ಲಿದ್ದ ನಾಲ್ವರೂ ನಿನ್ನೆ ಉಳ್ಳಾಲಕ್ಕೆ ಹೋಗಿದ್ದು, ಇಂದು ಹಿಂತಿರುಗುವ ವೇಳೆ ಈ ಅಪಘಾತ ಸಂಭವಿಸಿದೆ.









