Breaking News :

ಧರ್ಮಸ್ಥಳ ಬಗ್ಗೆ ಅಪಪ್ರಚಾರ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಪ್ರತಿಭಟನೆ : ತಪ್ಪು ಮಾಹಿತಿ ಹಂಚುವವರ ವಿರುದ್ಧ ಕ್ರಮಕ್ಕೆ ಆಗ್ರಹ 

 


ಜನವಾಹಿನಿ NEWS ಮಡಿಕೇರಿ : ಹಿಂದುಗಳ ಧಾರ್ಮಿಕ ಶ್ರದ್ಧಾಕೇಂದ್ರ ಧರ್ಮಸ್ಥಳದ ಮೇಲೆ ಆಗುತ್ತಿರುವ ಅಪಪ್ರಚಾರದ ವಿರುದ್ಧ ಹಾಗೂ ಇದನ್ನು ತಡೆಯುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಪತ್ರಿಭಟನಾ ನಿರತರು ಸರ್ಕಾರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿ, ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸ್ಪೀಕರ್ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಜಿ.ಬೋಪಯ್ಯ , ಧರ್ಮದ್ರೋಹಿಗಳ ಹಿನ್ನೆಲೆಯನ್ನು ಮಾದ್ಯಮಗಳು ಬಯಲಿಗೆಳೆಯುತ್ತಿದೆ. ಆದರೆ, ಸರ್ಕಾರದಿಂದ ಯಾಕೆ ಆಗುತ್ತಿಲ್ಲ ಎಂದು ಪ್ರಶ್ನಿಸಿದ ಅವರು, ಉಪಯೋಗಕ್ಕೆ ಭಾರದ ಗೃಹಮಂತ್ರಿ, ಸಿದ್ದರಾಮಯ್ಯ ಅವರು ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

ಎಸ್‌ಐಟಿಯನ್ನು ನಾವು ವಿರೋಧಿಸಿಲ್ಲ. ಅವರ ಮೇಲೆ ವಿಶ್ವಾಸವಿತ್ತು. ಅಧಿಕಾರಿಗಳಿಗೆ ಫ್ರೀ ಹ್ಯಾಂಡ್ ಇಲ್ಲ. ಪರಿಣಾಮ ಇಂದು ಧರ್ಮಸ್ಥಳದ ಪಾವಿತ್ರ್ಯೆತೆಗೆ ಧಕ್ಕೆ ತರುವುದು ಬಿಟ್ಟರೆ ಬೇರೆನು ಮಾಡುತ್ತಿಲ್ಲ ಎಂದರು.

ಧರ್ಮಸ್ಥಳ ಒಂದು ಧಾರ್ಮಿಕ ಮತ್ತು ಶ್ರದ್ಧಾ ಕೇಂದ್ರವಾಗಿದೆ. ನಮ್ಮ ನಂಭಿಕೆಯನ್ನು ಪ್ರಶ್ನೆ ಮಾಡುವ ಅಧಿಕಾರ ಯಾರಿಗೂ ಇಲ್ಲ. ಇಂತಹ ಘಟನೆಗಳನ್ನು ನೋಡುತ್ತಿದ್ದರೆ ನಾವು ಯಾವ ದೇಶದಲ್ಲಿದ್ದೇವೆ. ನಮ್ಮ ರಾಜ್ಯ ಎಲ್ಲಿದೇ ಎಂಬ ಪ್ರಶ್ನೆ ಮೂಡುತ್ತಿದೆ ಎಂದ ಅವರು, ಹಿಂದೂ ದೇವಸ್ಥಾನಗಳ ಮೇಲೆ ಷಡ್ಯಂತ್ರ ರೂಪಿಸಿ ಹಿಂದುಗಳನ್ನು ಒಡೆಯುವ ಜತೆಗೆ ಹಿಂದುಗಳನ್ನು ದಮನ ಮಾಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಸರ್ಕಾರ ಇಂತಹ ಹಿಂದು ವಿರೋಧಿ ಭಾವನೆ ಬಿಡಬೇಕೆಂದರು.

ಹಿಂದೂ ಭಾವನೆಯನ್ನು ಅಡಗಿಸುವಂತಹ ಪ್ರಯತ್ನ ನಡೆಯುತ್ತಿದೆ. ಗಣೇಶ ಉತ್ಸವ ಅಂದರೆ, ಹಿಂದೂಗಳ ಹಬ್ಬ. ವಿಜೃಂಬಣೆಯಿಂದ ಆಚರಿಸಲಾಗುತ್ತದೆ. ಆದರೆ ಇಂದು ಪೊಲೀಸ್ ಇಲಾಖೆಯಲ್ಲಿ ಮೆರವಣಿಗೆ ಮಾಡಲು ರೂ.೧೫೦೦ ಕಟ್ಟಬೇಕು. ಇದ್ಯಾವ ನ್ಯಾಯ. ಅಲ್ಪಸಂಖ್ಯಾತರು ಏನು ಮಾಡಿದರು ನಡೆಯುತ್ತಿದೆ. ತಾಕತ್ತಿದರೆ ಇವರು ಮಸಿದಿಯಲ್ಲಿ ಕೂಗುವ ಬಾಂಗ್ ಅನ್ನು ನಿಲ್ಲಿಸಲಿ ಎಂದು ಸವಾಲು ಎಸೆದ ಅವರು, ನಮ್ಮನ್ನು ಎರಡನೇ ದರ್ಜೆ ಪ್ರಜೆಗಳು ಎಂದು ನೋಡುವಂತಾಗಿದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ದೇಶಾದ್ಯಂತ ಕೋಟ್ಯಾಂತರ ಭಕ್ತಾದಿಗಳನ್ನು ಹೊಂದಿದೆ. ಕ್ಷೇತ್ರಕ್ಕೆ ದಿನನಿತ್ಯ ಲಕ್ಷಾಂತರ ಭಕ್ತಾದಿಗಳು ಆಗಮಿಸುತ್ತಾರೆ. ಹಿಂದೂಗಳಿಗೆ ಇದು ಪ್ರಮುಖ ಧಾರ್ಮಿಕ ಶ್ರದ್ಧೆಯ ಕೇಂದ್ರವಾಗಿದೆ. ಅಂತಹ ಧಾರ್ಮಿಕ ಭಾವನೆಯನ್ನು ಅಪಮಾನಿಸುವ ದುರುದ್ದೇಶದಿಂದ ಕೆಲವು ಕಿಡಿಗೇಡಿಗಳು ಹಾಗೂ ಎಡಪಂಥೀಯರು ಸುಳ್ಳು ಅಪಪ್ರಚಾರವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಸಂದರ್ಭ ಪ್ರತಿಭಟನಾ ನಿರತರು ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನುನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಸುನೀಲ್ ಸುಬ್ರಮಣಿ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷರಾದ ರಾಭೀನ್ ದೇವಯ್ಯ, ಬಿ.ಬಿ.ಭಾರತೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶೈ ಜೈನಿ, ನಗರಸಬೆ ಸದಸ್ಯರಾದ ಉಮೇಶ್ ಸುಬ್ರಮಣಿ, ಸತೀಶ್, ಸವಿತಾ ರಾಕೇಶ್, ಅರುಣ್ ಶೆಟ್ಟಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Share this article

ಟಾಪ್ ನ್ಯೂಸ್

More News