ಜನವಾಹಿನಿ ನ್ಯೂಸ್ ಕುಶಾಲನಗರ : ನಂಜರಾಯಪಟ್ಟಣದ ಪಳ್ಳಿ ಸಮೀಪ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಮೃತರನ್ನು ಕಬ್ಬಿನಗದ್ದೆಯ ರಘು ಅವರ ಪುತ್ರ, ರಾಫ್ಟಿಂಗ್ ಗೈಡ್ ಸುಬ್ರಮಣಿ (28), ತ್ಯಾಗತ್ತೂರಿನ ರಫೀಕ್ ಅವರ ಪುತ್ರ, ಪೈಂಟರ್ ರಿನಾಸ್ (21) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತ್ಯಾಗತ್ತೂರಿನ ಶ್ವಾಲಿನ್ ಎಂಬಾತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಮತ್ತೋರ್ವ ಗಾಯಾಳು ವಿರುಪಾಕ್ಷಪುರದ ಹರೀಶ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಸ್ಥಳದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪುವುದರೊಂದಿಗೆ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
Total Views: 19







