Breaking News :

ನಾಪೋಕ್ಲು ಹಲ್ಲೆ  ಪ್ರಕರಣ : ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಖಂಡನೆ – ಶಾಂತಿ ಸುವ್ಯವಸ್ಥೆ  ಕಾಪಾಡಲು ಮನವಿ

 


ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನು ಕ್ರಮ ಜರುಗಿಸಲಾಗುತ್ತೆ  ಉತ್ತಪ್ಪ


ಜನವಾಹಿನಿ News ಮಡಿಕೇರಿ : ನಾಪೋಕ್ಲು ವಿನಲ್ಲಿ ನಡೆದ ಹಲ್ಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಆರೋಪಿಗಳು ಎಷ್ಟೇ ಪ್ರಭಾವಶಾಲಿಗಾರೂ ಅವರ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತೆ ಎಂದಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಎಲ್ಲ ಧರ್ಮದವರಿಗೂ ಕೂಡ ಅವರವರ ಸಮಾವೇಶ, ಸಂಗಮ ಮಾಡಿಕೊಳ್ಳಲು ಅವಕಾಶವಿದೆ, ಇಂದು ನಡೆದ ಹಲ್ಲೆ ನಿಜಕ್ಕೂ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು.

ಜಿಲ್ಲೆಯ ವಿವಿಧಡೆ ಎಲ್ಲಾ ಕಡೆ ಶಾಂತಿಯಿಂದ ಹಿಂದು ಸಂಗಮ ನಡೆಯುತ್ತಿದ್ದಾಗ ನಾಪೋಕ್ಲುವಿನ ಹಲ್ಲೆ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದಿರುವ ಅವರು ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Share this article

ಟಾಪ್ ನ್ಯೂಸ್

More News