Breaking News :

ನಾಳೆ ಭಾಗಮಂಡಲದಲ್ಲಿ 33 ನೇ ವರ್ಷದ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ

 

 


ಜನವಾಹಿನಿ NEWS ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಯುವ ಒಕ್ಕೂಟ ಕೊಡಗು ಮಡಿಕೇರಿ, ವಿರಾಜಪೇಟೆ ಹಾಗೂ ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಹಾಗೂ ಶ್ರೀ ಕೃಷ್ಣ ಯೂತ್ ಕ್ಲಬ್ ಅಯ್ಯಂಗೇರಿ, ಇವರ ಸಂಯುಕ್ತ ಆಶ್ರಯದಲ್ಲಿ 33 ನೇ ವರ್ಷದ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಕಾರ್ಯಕ್ರಮವು (ಆಗಸ್ಟ್, 23 ರಂದು) ನಾಳೆ ಬೆಳಗ್ಗೆ 9 ಗಂಟೆಗೆ ಭಾಗಮಂಡಲದ ಬಳ್ಳಡ್ಕ ಅಪ್ಪಾಜಿ ಮತ್ತು ಅನು ಅವರ ಗದ್ದೆಯಲ್ಲಿ ನಡೆಯಲಿದೆ.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ. ಮಂತರ್ ಗೌಡ, ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಮಾಜಿ ವಿಧಾನಸಭಾ ಅಧ್ಯಕ್ಷರಾದ ಕೆ.ಜಿ.ಬೋಪಯ್ಯ, ಭಾಗಮಂಡಲ ಗ್ರಾ.ಪಂ.ಅಧ್ಯಕ್ಷರಾದ ಕಾಳನ ರವಿ, ಅಯ್ಯಂಗೇರಿ ಗ್ರಾ.ಪಂ.ಅಧ್ಯಕ್ಷರಾದ ಎಚ್.ಜಿ ಪುಷ್ಪಾ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ ಪ್ರಕಾಶ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಇತರರು ಪಾಲ್ಗೊಳ್ಳಲಿದ್ದಾರೆ.

ಬಳಿಕ ಸಂಜೆ 6.30 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ, ಹೊದ್ದೂರು ಗ್ರಾ.ಪಂ.ಅಧ್ಯಕ್ಷರಾದ ಎಚ್.ಎ.ಹಂಸ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ವಿ.ಪ್ರಸಾದ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಭಾಗಮಂಡಲ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಗ್ರಾ.ಪಂ.ಸದಸ್ಯರಾದ ಹೊಸೂರು ಸತೀಶ್ ಕುಮಾರ್, ನಾಪೋಕ್ಲು ಗ್ರಾ.ಪಂ. ಸದಸ್ಯರಾದ ಇಸ್ಮಾಯಿಲ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಕ್ಕಳ ತಜ್ಞರು ಮೇಜರ್ ಡಾ. ಕುಶ್ವಂತ್ ಕೋಳಿಬೈಲು, ಮೈ ಭಾರತ್ ನೆಹರು ಯುವ ಕೇಂದ್ರ ಜಿಲ್ಲಾ ಯುವ ಅಧಿಕಾರಿ ಕೆ.ಟಿ.ಕೆ. ಉಲ್ಲಾಸ್, ಅಯ್ಯಂಗೇರಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಹರೀಶ್, ಭಾಗಮಂಡಲ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಪಿ.ಆರ್.ನಂದ, ಪಿ.ಎಲ್.ಡಿ.ಬ್ಯಾಂಕ್, ಮಾಜಿ ನಿರ್ದೇಶಕರು, ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಲೀಡಿಂಗ್ ಎಡ್ಜ್ ಅಡ್ವರ್ ಟೈಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಎಡಿಕೇರಿ ಪ್ರಸನ್ನ ಕುಶಾಲಪ್ಪ ಇತರರು ಪಾಲ್ಗೊಳ್ಳಲಿದ್ದಾರೆ.

Share this article

ಟಾಪ್ ನ್ಯೂಸ್

More News