Breaking News :

ನಾಳೆ ಶಾಸಕ ಮಂತರ್ ಗೌಡ ಅಧ್ಯಕ್ಷತೆಯಲ್ಲಿ ದಸರಾ ಪೂರ್ವಭಾವಿ ಸಭೆ 


ಜನವಾಹಿನಿ NEWS ಮಡಿಕೇರಿ : ಈ ಬಾರಿಯ ಮಡಿಕೇರಿ ದಸರಾ ಉತ್ಸವವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳ ಪೂರ್ವ ತಯಾರಿ ಇತ್ಯಾದಿ ವಿಚಾರಗಳ ಕುರಿತು ಚರ್ಚಿಸಲು ಮಡಿಕೇರಿ ಶಾಸಕ ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ನಾಳೆ ಪೂರ್ವಭಾವಿ ಸಭೆ ನಡೆಯಲಿದೆ.

ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಾಳೆ ಪೂರ್ವಾಹ್ನ 12.30 ಗಂಟೆಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಉಪಸ್ಥಿತಿಯಲ್ಲಿ ನಡೆಯಲಿರುವ ಸಭೆಯಲ್ಲಿ ದಸರಾ ಉತ್ಸವ ಸಮಿತಿ ಹಾಗೂ ದಶಮಂಟಪ್ಪ ಸಮಿತಿಯ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

Share this article

ಟಾಪ್ ನ್ಯೂಸ್

More News