ಜನವಾಹಿನಿ News ಸಿದ್ದಾಪುರ : ಐನ್ ಆಪ್ಟಿಕಲ್ಸ್ ಅಪ್ರೋಮೆಟ್ರಿ ಕ್ಲಿನಿಕ್, ಕುಶಾಲನಗರ ಇವರ ಆಶ್ರಯದಲ್ಲಿ ಅಭ್ಯತ್ ಮಂಗಳ ಗ್ರಾಮೀಣಕೃಷಿಪತ್ತಿನ ಸಹಕಾರ ಸಂಘ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಉಚಿತ ನೇತ್ರ ತಪಾಸಣಾ ಶಿಬಿರ, ಹಾಗೂ ಚಿಕಿತ್ಸೆ ಶಿಬಿರವನ್ನು ಕೊಡಗು ಜಿಲ್ಲಾ ಜೆಡಿಎಸ್ ಸಾಮಾಜಿಕ ಜಾಲತಾಣ ಉಪಾಧ್ಯಕ್ಷರು, ನೆಲ್ಯಹುದಿಕೇರಿ ಜೆಡಿಎಸ್ ಗ್ರಾಮ ಸಮಿತಿ ಅಧ್ಯಕ್ಷ ಶಿಯಾಬುದ್ದೀನ್ ವಿ.ಪಿ.ಎಸ್ ಉದ್ಘಾಟಿಸಿದರು. ಬಳಿಕಮಾತನಾಡಿದ ಅವರು ಸಂಸ್ಥೆಯು ನೀಡುತ್ತಿರುವ ಕಣ್ಣಿನ ತಪಾಸಣೆ ಹಾಗೂಉಚಿತ ಸೇವೆಯನ್ನು ಗ್ರಾಮಸ್ಥರು ಪಡೆದುಕೊಳ್ಳಬೇಕೆಂದರು.
50ಕ್ಕಿಂತಲೂ ಅಧಿಕ ಮಂದಿ ಉಚಿತ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಉಚಿತ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು. ಶಿಬಿರದಲ್ಲಿ ಅಗತ್ಯವಿದ್ದವರಿಗೆ ರಿಯಾಯಿತಿ ದರದಲ್ಲಿ ಕನ್ನಡಕಗಳನ್ನು ಸಹ ವಿತ್ತರಿಸಲಾಯಿತು.
ಸಂಸ್ಥೆಯಮುಖ್ಯಸ್ಥರಾದ ಫಾಸಿಲ್ ರಹೀಮ್, ಅನ್ಸಾರ್, ಅನ್ಸಾರುದ್ದೀನ್ , ಶಿಫಾನತ್, ಫಾತಿಮತ್ ಅಫೀಫ ಇಬ್ರಾಹಿಂ, ಉಪಸ್ಥಿತರಿದ್ದರು.








