ಜನವಾಹಿನಿ News ಮಡಿಕೇರಿ : ಕೊಡಗು ಜಿಲ್ಲೆಯ ಪಾಲಿಬೆಟ್ಟ ಸಮೀಪದ ಕೈಮಕಾಡು ಎಸ್ಟೇಟ್‌ನಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಕಾರ್ಮಿಕರಲ್ಲಿ ತೀವ್ರ ಭೀತಿ ಮೂಡಿಸಿದೆ. ಶನಿವಾರ ಬೆಳಿಗ್ಗೆ ಸೌದೆಗಾಗಿ ಹೋದ ಕಾರ್ಮಿಕರು ಹುಲಿಯ ಘರ್ಜನೆ ಕೇಳಿ ಪರಾರಿಯಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆಯಷ್ಟೇ ಮಡಿಕೇರಿ ಸಮೀಪದ ಇಬ್ಬನಿವಳವಾಡಿಯಲ್ಲಿ ಹುಲಿ ಕಾಣಿಸಿಕೊಂಡಿದ್ದ, ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ.
ಇದೀಗ ಪಾಲಿಬೆಟ್ಟ ವ್ಯಾಪ್ತಿಯಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ತೋಟದ ಕೆಲಸಕ್ಕೆ ಹೋಗಲು ಕಾರ್ಮಿಕರು ಆತಂಕ ವ್ಯಕ್ತಪಡಿಸಿದ್ದು, ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಆದರೆ ಅದು ಹುಲಿಯೇ ಅಥವಾ ಬೇರೆ ಯಾವುದಾದರೂ ಮೃಗವೋ ಎಂಬ ಕುರಿತು ಅರಣ್ಯ ಇಲಾಖೆಯಿಂದ ಸ್ಪಷ್ಟವಾದ ಮಾಹಿತಿ ಇನ್ನೂ ದೊರೆತಿಲ್ಲ.







