Breaking News :

ಪೊನ್ನಂಪೇಟೆಯಲ್ಲಿ ನೂತನ ನ್ಯಾಯಾಲಯ ಉದ್ಘಾಟನೆ – ನ್ಯಾಯಾಂಗ ಬಲಿಷ್ಠವಾಗಿದ್ದರೆ ಪ್ರಜಾಪ್ರಭುತ್ವ ಉಳಿಯುತ್ತದೆ: ಶಾಸಕ ಎ.ಎಸ್.ಪೊನ್ನಣ್ಣ

 


ಜನವಾಹಿನಿ ನ್ಯೂಸ್ ಪೊನ್ನಂಪೇಟೆ : ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕು ಕೇಂದ್ರದಲ್ಲಿ ನೂತನವಾಗಿ ಸ್ಥಾಪಿಸಲಾದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯವನ್ನು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಉದ್ಘಾಟಿಸಿದರು. ಇ-ಸೇವಾ ಕೇಂದ್ರಕ್ಕೂ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ, ರಾಷ್ಟ್ರದ ಸಂವಿಧಾನದಲ್ಲಿ ನ್ಯಾಯಾಂಗ ಪ್ರಮುಖ ಪಾತ್ರ ವಹಿಸುತ್ತದೆ. ನ್ಯಾಯಾಂಗ ವ್ಯವಸ್ಥೆ ಬಲಿಷ್ಠವಾಗಿದ್ದರೆ ಮಾತ್ರ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ. ಪೊನ್ನಂಪೇಟೆಯಲ್ಲಿ ಬಹು ವರ್ಷಗಳ ಕನಸು ನನಸಾಗಿದೆ ಎಂದು ಹೇಳಿದರು.

ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಮಾತನಾಡಿ, ಶ್ರೀಸಾಮಾನ್ಯನಿಗೆ ತಾಲ್ಲೂಕು ಮಟ್ಟದಲ್ಲೇ ನ್ಯಾಯ ಸಿಗಬೇಕು ಎಂಬ ಉದ್ದೇಶದಿಂದ ಈ ನ್ಯಾಯಾಲಯ ಸ್ಥಾಪಿಸಲಾಗಿದೆ ಎಂದರು.

ಹೈಕೋರ್ಟ್ ನ್ಯಾಯಮೂರ್ತಿಗಳಾದ ಎಂ.ಜಿ.ಶುಕುರೆ ಕಮಲ್, ಎಸ್.ರಾಚಯ್ಯ, ಸಿ.ಎಂ.ಪೂಣಚ್ಚ ಮತ್ತಿತರರು ಮಾತನಾಡಿ, ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಮತ್ತು ಸೆಷನ್ ನ್ಯಾಯಾಧೀಶ ಮಾರುತಿ ಎಸ್. ಬಗಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಜಯಲಕ್ಷ್ಮಿ, ವಕೀಲರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Share this article

ಟಾಪ್ ನ್ಯೂಸ್

More News