Breaking News :

ಪೊನ್ನಂಪೇಟೆ ಪಟ್ಟಣ ಪಂಚಾಯಿತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

 


ಪೊನ್ನಂಪೇಟೆ ಪಟ್ಟಣ ಪಂಚಾಯಿತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ


ಪೊನ್ನಂಪೇಟೆ : ಇಲ್ಲಿನ ಪಟ್ಟಣ ಪಂಚಾಯಿತಿ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಪಟ್ಟಣ ಪಂಚಾಯಿತಿ ಆವರಣದಲ್ಲಿ ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಆಲೀರ ರಶೀದ್ ಧ್ವಜಾರೋಹಣ ನೆರವೇರಿಸಿದರು. ನಂತರ ಧ್ವಜವಂದನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ಮೂಕಳೇರ ಸುಮಿತ, ಕೋಳೇರ ಭಾರತಿ, ಕರ್ತಮಾಡ ರಶಿಕ, ಮೂಕಳೇರ ಮಧುಕುಮಾರ್, ರಾಮಕೃಷ್ಣ ವಿಜಯಕುಮಾರ್, ಎ. ಎ. ಅಜೀಜ್, ಮಚ್ಚಮಾಡ ವಿಲ್ಮ, ಆರತಿ ಸುರೇಶ್, ಮುಖ್ಯಾಧಿಕಾರಿ ಗೋಪಿ, ಪೊನ್ನಂಪೇಟೆ ಹಿರಿಯ ನಾಗರಿಕ ವೇದಿಕೆಯ ಪ್ರಮುಖರಾದ ಕಾಟಿಮಾಡ ಜಿಮ್ಮಿ ಅಯ್ಯಣ್ಣ, ಪಟ್ಟಣ ಪಂಚಾಯಿತಿಯ ಸಿಬ್ಬಂದಿಗಳು ಪೌರಕಾರ್ಮಿಕರು ಸೇರಿದಂತೆ, ಪೊನ್ನಂಪೇಟೆಯ ಹಲವು ಪ್ರಮುಖರು ಪಾಲ್ಗೊಂಡಿದ್ದರು.

 

Share this article

ಟಾಪ್ ನ್ಯೂಸ್

More News