ಜನವಾಹಿನಿ News ಮಡಿಕೇರಿ : ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಹೇಳನ ಮಾಡಿದ ಯುವಕರ ಗಡಿಪಾರಿಗೆ ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು.
ಇಂದಿರಾಗಾಂಧಿ ವೃತ್ತದಲ್ಲಿ ಸೇರಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಅಸಮಾಧಾನ ಹೊರಹಾಕಿದರಲ್ಲದೆ, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು.
ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಅಪ್ಪಚ್ಚು ರಂಜನ್, ಭಾರತದ ಪ್ರಧಾನಿ ನರೇಂದ್ರ ಮೋದಿ ಇಡೀ ಪ್ರಪಂಚದಲ್ಲಿಯೇ ವಿಶ್ವಗುರು ಎಂದು ಹೆಸರು ಪಡೆದಿದ್ದಾರೆ.
ಆದರೆ ಇಂದು ಕೆಲವರು ಪ್ರಧಾನಿ ವಿರುದ್ಧವೇ ಅವಹೇಳನಕಾರಿಯಾಗಿ ಹೇಳಿಕೆ ನೀಡುವ ಕಾರ್ಯ ಮಾಡುತ್ತಿದ್ದಾರೆ. ಇಂತವರನ್ನು ಪಾಕಿಸ್ತಾನಕ್ಕೆ ಕಳಿಸಬೇಕು ಎಂದು ಅಸಮಾಧಾನ ವ್ಯಕ್ತ ಪಡಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ರಾಜ್ಯದಲ್ಲಿ ಅರಜಾಕತೆ ತಾಂಡವವಾಡುತ್ತಿದೆ. ಕೊಡಗಿನಲ್ಲಿಯೂ ಇಂತಹ ಬೆಳವಣಿಗೆ ನಡೆದಿದೆ. ಆದರಿಂದ ಮೋದಿ ಹೆಸರಿಗೆ ಕಳಂಕ ತರಲು ಯತ್ನಿಸಿದವರ ವಿರುದ್ಧ ಕಠಿಣ ಕ್ರಮವಾಗಬೇಕು ಇಲ್ಲವಾದಲ್ಲಿ ಅವರನನ್ನ ಗಡೀಪಾರು ಮಾಡಬೇಕು. ಇಲ್ಲದಿದ್ದಲ್ಲಿ ಇಂತವರು ಸಮಾಜವನ್ನು ಒಡೆಯುವ ಕೆಲಸವನ್ನು ಮುಂದುವರೆಸುತ್ತಾರೆಂದು ಹೇಳಿದರು.
ಮುಂದೆಯೂ ಇಂತಹ ಬೆಳವಣಿಗೆ ನಡೆದರೆ ಜಿಲ್ಲೆ ಅಶಾಂತಿಯ ತಾಣವಾಗುತ್ತದೆ. ಇದಕ್ಕೆ ರಾಜ್ಯ ಸರಕಾರ, ಪೊಲೀಸ್ ಇಲಾಖೆಯೇ ಹೊಣೆಯಾಗಲಿದೆ ಎಂದು ಎಚ್ಚರಿಸಿದರು.
ಮಾಜಿ ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ನಗರಸಭೆ ಅಧ್ಯಕ್ಷೆ ಕಲಾವತಿ. ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅನಿತಾ ಪೂವಯ್ಯ, ಮಡಿಕೇರಿ ನಗರಸಭಾ ಉಪಾಧ್ಯಕ್ಷ ಮಹೇಶ್ ಜೈನಿ, ಪ್ರಮುಖರಾದ ಅರುಣ್ ಕುಮಾರ್, ಕಿಶೋರ್ ತಳೂರು, ರವಿ ಬಸಪ್ಪ, ಜಗದೀಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.







