Breaking News :

ಪ್ರವಾಸೋದ್ಯಮ/ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

 


ಜನವಾಹಿನಿ NEWS ಮಡಿಕೇರಿ : ಪ್ರವಾಸೋದ್ಯಮ ಇಲಾಖೆಯಿಂದ 2024-25 ಹಾಗೂ 2025-26 ನೇ ಸಾಲಿನಲ್ಲಿ ಪ್ರವಾಸೋದ್ಯಮ/ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಪ್ಟ್ ಇನ್ಸ್‍ಟ್ಯೂಟ್(ಎಫ್‍ಸಿಐ), ಮೈಸೂರು ಇನ್ಸ್‍ಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್ (ಐಎಚ್‍ಎಂ) ಬೆಂಗಳೂರು ರವರ ಮೂಲಕ ವಸತಿ ಸಹಿತ ಕಾರ್ಯಕ್ರಮ ಜಾರಿಗೊಳಿಸಲು ಉದ್ದೇಶಿಸಲಾಗಿದೆ. 

ಕಾರ್ಯಕ್ರಮಗಳ ವಿವರ –ಆಹಾರ ಮತ್ತು ಪಾನೀಯ ಸೇವೆಯ ಉಸ್ತುವಾರಿ, ಕನಿಷ್ಟ ವಿದ್ಯಾರ್ಹತೆ- ಎಸ್‍ಎಸ್‍ಎಲ್‍ಸಿ ಪಾಸ್, ತರಬೇತಿ ಕಾಲಾವಧಿ 540 ಗಂಟೆಗಳು (300 ಗಂಟೆಗಳು +240 ಗಂಟೆಗಳು ಒಜೆಟಿ) 15 ವಾರಗಳು (04 ತಿಂಗಳುಗಳು), ವಯಸ್ಸು 20 ರಿಂದ 45 ವರ್ಷ ಮೇಲ್ಪಟ್ಟವರು, ಕೊಡಗು ಜಿಲ್ಲೆಯ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ -2 ಕೊಡಗು ಜಿಲ್ಲೆಯ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಗುರಿ-1  

ಅರ್ಜಿದಾರರು ಇತ್ತೀಚಿನ ಭಾವಚಿತ್ರ, ಆದಾರ್ ಕಾರ್ಡ್, ರೇಷನ್ ಕಾರ್ಡ್, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿರುವ ಬಗ್ಗೆ ತಹಶೀಲ್ದಾರರಿಂದ ಪಡೆದುಕೊಂಡಿರುವ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದ ಪ್ರತಿ, ತಹಶೀಲ್ದಾರರಿಂದ ಪಡೆದುಕೊಂಡಿರುವ ಚಾಲ್ತಿಯಲ್ಲಿರುವ ಆದಾಯ ಪ್ರಮಾಣ ಪತ್ರದ ಪ್ರತಿ, ವಿದ್ಯಾರ್ಹತೆಯ ಬಗ್ಗೆ ಎಸ್‍ಎಸ್‍ಎಲ್‍ಸಿ ಯಲ್ಲಿ ಉತ್ತೀರ್ಣರಾಗಿರುವ ಅಂಕಪಟ್ಟಿಯ ಪ್ರತಿ ಸಲ್ಲಿಸಬೇಕು. 

ತರಬೇತಿ ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ನಮೂನೆಗಳನ್ನು ಉಪ ನಿದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ, ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದ್ವಿ-ಪ್ರತಿಯಲ್ಲಿ ಆಗಸ್ಟ್ 26 ರ ಸಂಜೆ 5 ಗಂಟೆಯೊಳಗೆ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಕಚೇರಿಗೆ ಸಲ್ಲಿಸಲು ತಿಳಿಸಿದೆ. 

ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ-571201 ದೂ.ಸಂ. 08272-200519 ಅಥವಾ ಈ-ಮೇಲ್ ddkodagutourism@gmail.com ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Share this article

ಟಾಪ್ ನ್ಯೂಸ್

More News