ಪ್ರವೀಣ್ ನೆಟ್ಟಾರ್ ಹತ್ಯೆಗೆ ಮೂರು ವರ್ಷ : ಸಂಸದ, ಶಾಸಕರಿಂದ ಪುತ್ಥಳಿ, ಸ್ಮಾರಕಕ್ಕೆ ಗೌರವಾರ್ಪಣೆ
ಸುಳ್ಯ : ಭಾರತೀಯ ಜನತಾ ಪಕ್ಷದ ಯುವ ಮೋರ್ಛಾ ನಾಯಕ ಪ್ರವೀಣ್ ನೆಟ್ಟಾರ್ ಅವರನ್ನು ದುಷ್ಕರ್ಮಿಗಳು ಹತ್ಯೆಗೈದು ಮೂರು ವರ್ಷಗಳಾದ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ಬಲಿದಾನ ದಿನವನ್ನಾಗಿ ಆಚರಿಸಲಾಯಿತು.
ಸಂಸದ ಕ್ಯಾ.ಬ್ರಿಜೇಶ್ ಚೌಟರವರು ಅವರ ಸಮಾಧಿಗೆ ತೆರಳಿ ಪುಷ್ಪಾರ್ಚನೆ ನಡೆಸಿ ಗೌರವ ಸಲ್ಲಿಸಿದರು.
ಭೇಟಿ ನೀಡಿದ ಸಂದರ್ಭದಲ್ಲಿ ಕುಟುಂಬದವರೊಂದಿಗೆ ಮಾತುಕತೆ ನಡೆಸಿ, ಅವರ ಪೋಷಕರು ಮತ್ತು ಕುಟುಂಬಸ್ಥರ ಬಗ್ಗೆ ಕುಶಲೋಪರಿ ನಡೆಸಿದರು.
ಶಾಸಕಿ ಭಾಗೀರಥಿ ಮುರುಳ್ಯ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ್, ಜಿಲ್ಲಾ ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಹಾಗೂ ಹಲವಾರು ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
ಅಂಕದಡ್ಕ ಗ್ರಾಮದ ವೀರ ಸಾವರ್ಕರ್ ವೃತ್ತದಲ್ಲಿ ಪ್ರವೀಣ್ ನೆಟ್ಟಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸಲ್ಲಿಸಲಾಯಿತು.








