Breaking News :

ಬಿಜೆಪಿಗರಿಂದ ಜನತೆಗೆ ತಪ್ಪು ಸಂದೇಶ : ಕಾಂಗ್ರೆಸ್ ಆರೋಪ 

ಬಿಜೆಪಿಗರಿಂದ ತಪ್ಪು ಸಂದೇಶ : ಕಾಂಗ್ರೆಸ್ ಆರೋಪ

ಮಡಿಕೇರಿ : ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರ ಹಾಗೂ ಶಾಸಕರ ಕಾಳಜಿಯಿಂದ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ ಇದನ್ನು ತಾಳಲಾರದೆ ಬಿಜೆಪಿಗರು ಜನತೆಗೆ ತಪ್ಪು ಸಂದೇಶವನ್ನು ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಟಿ.ಇ.ಸುರೇಶ್ ಆರೋಪಿಸಿದ್ದಾರೆ.

ನಗರದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಸರ್ಕಾರವಿದ್ದ ಸಂದರ್ಭದಲ್ಲಿ ಅಭಿವೃದ್ಧಿಯ ಕಾಳಜಿ ಇರಲಿಲ್ಲ. ಆದರೆ, ಇಂದು ಸರ್ಕಾರ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಮಂತರ್‌ಗೌಡ ವಿಶೇಷ ಕಾಳಜಿಯಿಂದ ಜಿಲ್ಲೆಗೆ ಸಾಕಷ್ಟು ಅನುದಾನವನ್ನು ತರಲಾಗಿದೆ. ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದೆ ಎಂದು ಹೇಳಿದರು.

ಇಂದು ಬಿಜೆಪಿ ನಾಯಕರು ಸರ್ಕಾರವನ್ನು ಅಸ್ತಿರಗೊಳಿಸುವ ಹುನ್ನಾರ ನಡೆಸುವುದರ ಜತೆಗೆ ರಾಜ್ಯ ಸರ್ಕಾರ ಬೀಳುತ್ತದೆ ಎಂದು ಹೇಳುತ್ತಿದ್ದಾರೆ. ಆದರೆ, ಚಂದ್ರಬಾಬು ನಾಯ್ಡು ಮತ್ತು ನಿತೀಶ್ ಕುಮಾರ್ ಇಲ್ಲದಿದ್ದರೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿಲ್ಲ ಎಂಬುದನ್ನು ಮರೆತ್ತಿದ್ದಾರೆ ಎಂದ ಅವರು, ನಮ್ಮ ಸರ್ಕಾರ ಸಂಪೂರ್ಣ ಬಹುಮತದೊಂದಿಗೆ ಆಡಳಿತ ನಡೆಸುತ್ತಿದೆ. ಅಭಿವೃದ್ಧಿಯು ಕಾಣುತ್ತಿದೆ ಎಂದರು.

ನಗರಸಭೆ ನಾಮ ನಿರ್ದೇಶಕ ಸದಸ್ಯರಾದ ಬಿ.ಎಂ.ಮುದ್ದುರಾಜ್, ಸದಾ ಮುದ್ದಪ್ಪ, ನಿಡ್ತ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಕೆ.ಅಶೋಕ್, ಸದಸ್ಯ ವಿ.ತಸ್ಲಿಮ್, ಕಾಂಗ್ರೆಸ್ ಮುಖಂಡ ಎಚ್.ಎಂ.ಜಯರಾಮ್ ಸುದ್ದಿಗೋಷ್ಠಿಯಲ್ಲಿದ್ದರು.

Share this article

ಟಾಪ್ ನ್ಯೂಸ್

More News