Breaking News :

ಬೆಂಗಳೂರಿನಲ್ಲಿ ಮೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ


ಬೆಂಗಳೂರಿನಲ್ಲಿ ಮೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ


ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಳೂರಿನ ಕೆಎಸ್ಆರ್ ರೈಲು ನಿಲ್ದಾಣದಲ್ಲಿ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು.

ಬೆಂಗಳೂರಿನಿಂದ ಬೆಳಗಾವಿ, ಅಮೃತಸರದಿಂದ ಮಾತಾ ವೈಷ್ಣೋದೇವಿ ಕತ್ರಾ ಮತ್ತು ನಾಗ್ಪುರ (ಅಜ್ನಿ) ದಿಂದ ಪುಣೆ ಹೋಗುವ ಮೂರು ವಂದೇ ಭಾರತ್ಗೆ ಹಸಿರು ನಿಶಾನೆ ತೋರಿದರು. ಈ ಹೈಸ್ಪೀಡ್ ರೈಲುಗಳು ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸಲಿದೆ. ಬಹುನಿರೀಕ್ಷಿತ ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು ರಾಜ್ಯದ 11ನೇ ಹೊಸ ವಂದೇ ಭಾರತ್ ರೈಲು ಸೇವೆಯಾಗಿದೆ. ಬೆಳಗಾವಿ-ಬೆಂಗಳೂರು ಮಾರ್ಗವನ್ನು ಈ ವಂದೇ ಭಾರತ್ ರೈಲು ಸುಮಾರು 8.50 ಗಂಟೆಗಳಲ್ಲಿ ಕ್ರಮಿಸಲಿದೆ.

ಖುಷಿ ಹಂಚಿಕೊಂಡ ಮೋದಿ : ಇದೇ ವೇಳೆ ನೂತನ ವಂದೇ ಭಾರತ್ ರೈಲು ಒಳಗೆ ಹೆಜ್ಜೆ ಹಾಕಿದ ಪ್ರಧಾನಿ ಮೋದಿ ಅವರು ಕೂತಿದ್ದ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ ಖುಷಿ ಹಂಚಿಕೊಂಡರು.‌ ಬೆಂಗಳೂರಿನ ಕೆಎಸ್ಆರ್ ರೈಲು ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಸಿದ್ದರಾಮಯ್ಯ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ವಿ. ಸೋಮಣ್ಣ, ಸಚಿವ ದಿನೇಶ್ ಗುಂಡೂರಾವ್, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ಸಂಸದ ಪಿ. ಸಿ. ಮೋಹನ್ ಉಪಸ್ಥಿತರಿದ್ದರು.

Share this article

ಟಾಪ್ ನ್ಯೂಸ್

More News