Breaking News :

ಭರತನಾಟ್ಯ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತೀರ್ಥಪ್ರಿಯ 

 

ಜನವಾಹಿನಿ NEWS ಸಿದ್ದಾಪುರ : 2024-25ನೇ ಸಾಲಿನ ಡಾಕ್ಟರ್ ಗಂಗೂಬಾಯಿ ಹಾನಗಲ್ ಸಂಗೀತ ಕಲಾ ವಿಶ್ವವಿದ್ಯಾಲಯ ಮೈಸೂರಿನಲ್ಲಿ ನಡೆದ ಜೂನಿಯರ್ ಭರತನಾಟ್ಯ ಪರೀಕ್ಷೆಯಲ್ಲಿ ಪಿ.ಎಂ.ಶ್ರೀ ನವೋದಯ ವಿದ್ಯಾಲಯದ 9 ನೇ ತರಗತಿಯ ವಿದ್ಯಾರ್ಥಿನಿ ತೀರ್ಥಪ್ರಿಯ. ಎಂ ಬಿ, 94.5% ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ತೀಥಪ್ರಿಯಾ ಅವರು ಕಳೆದ ಆರು ವರ್ಷಗಳಿಂದ ಜಗನ್ಮೋಹನ ನಾಟ್ಯಾಲಯ, ಶಿಕ್ಷಕ ರಾಜೇಶ್ ಆಚಾರ್ಯರವರ ಮಾರ್ಗದರ್ಶನದಲ್ಲಿ ನೃತ್ಯ ಕಲಿಯುತ್ತಿದ್ದಾರೆ. ವಿದ್ಯಾಭ್ಯಾಸದ ಜೊತೆಗೆ ಕಲೆ ಕ್ಷೇತ್ರದಲ್ಲಿಯೂ ಸಾಧನೆ ಮಾಡುತ್ತಿರುವುದು ಅವರ ವೈಶಿಷ್ಟ್ಯ.

ಅಭ್ಯತಮಂಗಲ ಗ್ರಾಮದ ಬಾಬು ಹಾಗೂ ಸುಮಿತ್ರ ದಂಪತಿಯ ಪುತ್ರಿಯಾಗಿರುವ ತೀಥಪ್ರಿಯಾ ಅವರ ಸಾಧನೆಗೆ ಶಿಕ್ಷಕರು, ಸ್ನೇಹಿತರು ಹಾಗೂ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದಾರೆ.

Share this article

ಟಾಪ್ ನ್ಯೂಸ್

More News