Breaking News :

ಭೀಕರ ರಸ್ತೆ ಅಪಘಾತ – ಓರ್ವ ಸ್ಥಳದಲ್ಲೇ ಸಾವು – ಮತ್ತೋರ್ವ ಗಂಭೀರ


ಜನವಾಹಿನಿ News ಸಿದ್ದಾಪುರ 

ಭೀಕರ ರಸ್ತೆ ಅಪಘಾತ ಓರ್ವ ಸ್ಥಳದಲ್ಲೇ ಸಾವು

ಮತ್ತೋರ್ವ ಗಂಭೀರ

ಅಮ್ಮತ್ತಿ ಸಮೀಪದ ಆನಂದಪುರದಲ್ಲಿ ನಡೆದ ಘಟನೆ

ಅಮ್ಮ ತ್ತಿ ಕಡೆಯಿಂದ ಕಾಲ್ನಡಿಗೆಯಲ್ಲಿ ಬರುತ್ತಿದ್ದ ವ್ಯಕ್ತಿಗೆ ಸ್ಕೂಟಿಯೊಂದು ಡಿಕ್ಕಿ ಹೊಡೆದಿದೆ.

ಡಿಕ್ಕಿ ರಭಸಕ್ಕೆ ವ್ಯಕ್ತಿ ರಸ್ತೆಗೆ ಬಿದ್ದಿದ್ದಾನೆ. ರಸ್ತೆಗೆ ಬಿದ್ದ ಆತನ ಮೇಲೆ ಹಿಂಬದಿಯಿಂದ ಬಂದ ಕಾರೊಂದು ಹರಿದಿದೆ.

ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಆನಂದಪುರ ನಿವಾಸಿ ಏನೋಸ್ ಮನೋಹರ್ (ಮನು) 43 ಎಂಬಾತನೇ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಗಂಭೀರ ಸ್ಥಿತಿಯಲ್ಲಿದ್ದ ಸ್ಕೂಟಿ ಸವಾರ ನೆಲ್ಯಹುದಿಕೇರಿಯ ಹಂಸ ಎಂಬಾತನನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು

ಡಿಕ್ಕಿ ಪಡಿಸಿ ಪರಾರಿಯಾದ ಕಾರಿನ ಪತ್ತೆಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ.

Share this article

ಟಾಪ್ ನ್ಯೂಸ್

More News