Breaking News :

ಮಂಗಳೂರು-ಮಡಿಕೇರಿ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ : ಬೆಟ್ಟತ್ತೂರಿನಲ್ಲಿ ಕಾಡಾನೆ ದಾಳಿಗೆ ಮೃತ ಪಟ್ಟ ವಿದ್ಯಾರ್ಥಿನಿಗೆ ನ್ಯಾಯ ಕೊಡಿಸಲು ಆಗ್ರಹ

ಅರಣ್ಯ ಅಧಿಕಾರಿಗಳ ಸಹಿ ಇಲ್ಲದ ಪರಿಹಾರದ ಚೆಕ್ಕ್ ವಿತರಣೆ :ಬೇಜವಾಬ್ದಾರಿ ಪ್ರದರ್ಶಿಸಿದ ಅಧಿಕಾರಿಗಳ ವಿರುದ್ಧ ಜನಾಕ್ರೋಶ


ಜನವಾಹಿನಿ News ಮಡಿಕೇರಿ : ಶನಿವಾರ ಸಂಜೆ ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ಆನೆ ದಾಳಿಗೆ ಬೆಟ್ಟತ್ತೂರು ಗ್ರಾಮದ ಗಿರೀಶ್ ಅವರ ಪುತ್ರಿ ಪೂಜಾ(17) ಮೃತ ಪಟ್ಟ ಘಟನೆಗೆ ಸಂಬಂಧಿಸಿದಂತೆ ಭಾನುವಾರ ಬೆಟ್ಟತೂರು ಗ್ರಾಮಸ್ಥರು ಮಡಿಕೇರಿ ಮಂಗಳೂರು ಹೆದ್ದಾರಿ ಮದೆ ಗ್ರಾಮದಲ್ಲಿ ಅರಣ್ಯ ಅಧಿಕಾರಿಗಳ ವಿರುದ್ಧ ರಸ್ತೆ ತಡೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಅರಣ್ಯ ಅಧಿಕಾರಿಗಳು ಕುಟುಂಬಸ್ಥರಿಗೆ ಪರಿಹಾರದ ಚೆಕ್ಕನ್ನು ವಿತರಿಸಿದರು. ಆದರೆ ಚೆಕ್ಕ್ ನಲ್ಲಿ ಅರಣ್ಯ ಅಧಿಕಾರಿಗಳ ಸಹಿ ಇಲ್ಲದನ್ನು ಗಮನಿಸಿದ ಗ್ರಾಮಸ್ಥರು ಅರಣ್ಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ಅರಣ್ಯ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆಯನ್ನು ನಡೆಸಿದ್ದಾರೆ.

Share this article

ಟಾಪ್ ನ್ಯೂಸ್

More News